Advertisement

ದೇಶದ ಉತ್ತುಂಗಕ್ಕೇರಲಿ ಪಿಡಿಎ ಕಾಲೇಜು

03:01 PM Mar 31, 2019 | Team Udayavani |

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ (ಪಿಡಿಎ) ತಾಂತ್ರಿಕ ಮಹಾವಿದ್ಯಾಲಯವು ಗುಣಮಟ್ಟದ ಕಲಿಕೆ ಮತ್ತು ವಿದ್ಯಾರ್ಥಿಗಳನ್ನು ಭವಿಷ್ಯದ ಶ್ರೇಷ್ಠ ಉದ್ಯಮಿಗಳನ್ನಾಗಿ ರೂಪಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಆಗಬೇಕೆಂದು ಸಂಸ್ಥೆಯ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ ಆಶಯ ವ್ಯಕ್ತಪಡಿಸಿದರು.

Advertisement

ನಗರದ ಪಿಡಿಎ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿರುವ ಅಂತರ್‌ ಕಾಲೇಜು ತಾಂತ್ರಿಕ-ಸಾಂಸ್ಕೃತಿಕ “ನಿರ್ಮಾಣ್‌-2019′ ಉತ್ಸವಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಮಹಾವಿದ್ಯಾಲಯದಲ್ಲಿ ಪ್ರತಿಯೊಂದು ಹಂತದಲ್ಲಿ ಕಲಿಕೆಗೆ ಪೂರಕವಾದ ಉತ್ತಮ ವಾತಾವರಣ ನಿರ್ಮಿಸಲಾಗಿದೆ. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸ್ನೇಹಪೂರ್ವಕವಾಗಿ ಬೆರೆತು ಮಹಾವಿದ್ಯಾಲಯವನ್ನು ದೇಶದ ಉತ್ತುಂಗಕ್ಕೆ ಕೊಂಡೊಯಬೇಕೆಂದು ಕರೆ ನೀಡಿದರು.

ಮಹಾವಿದ್ಯಾಲಯದಲ್ಲಿ ಗುಣಮಟ್ಟದ ಅಧ್ಯಯನಕ್ಕೆ ಒತ್ತು ನೀಡುವುದರೊಂದಿಗೆ ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಹೆಚ್ಚಿನ ಸಮಯ ತೊಡಗಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ “ನಿರ್ಮಾಣ್‌’ಉತ್ಸವ ವಿದ್ಯಾರ್ಥಿಗಳಿಗೆ ಒಳ್ಳೆಯ ವೇದಿಕೆಯಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೂ ಉತ್ಸವ ಸಾಕ್ಷಿಯಾಗಲಿದೆ ಎಂದರು.

ಪ್ರತಿಷ್ಠಿತ ಸಂಸ್ಥೆಗಳೊಂದಿಗೆ ಒಪ್ಪಂದ: ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇನ್ಫೋಸಿಸ್‌ ಸೇರಿದಂತೆ ಪ್ರತಿಷ್ಠಿತ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಸಕ್ತ ವರ್ಷ ವಿವಿಧ ಕಂಪನಿಗಳು ನಡೆಸಿದ ಸಂದರ್ಶನದಲ್ಲಿ ಈಗಾಗಲೇ 130 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಡಾ| ಶಿವಾನಂದ ದೇವರಮನಿ, ಕಾರ್ಯದರ್ಶಿ ನಾಗೇಂದ್ರ ಮಂಠಾಳೆ, ಜಂಟಿ ಕಾರ್ಯದರ್ಶಿ ಗಂಗಾಧರ ಎಲಿ, ಸದಸ್ಯರಾದ ವಿಜಯಕುಮಾರ ದೇಶಮುಖ, ನಿತಿನ್‌ ಜವಳಿ, ಸತೀಶಚಂದ್ರ ಹಡಗಲಿಮಠ, ಶಿವಶರಣಪ್ಪ ನಿಗ್ಗುಡಗಿ, ಜಗದೀಶ ಮಾಲು, ಅರುಣಕುಮಾರ ಎಂ ಪಾಟೀಲ, ಕಾಲೇಜಿನ ಪ್ರಾಂಶುಪಾಲ ಡಾ| ಎಸ್‌.ಎಸ್‌.ಹೆಬ್ಟಾಳ್‌, ಉತ್ಸವದ ಸಂಚಾಲಕ ಡಾ| ಮಹಾದೇವಪ್ಪ ಗಾದಗೆ, ಡಾ| ಸುಜಾತಾ ತೇರದಾಳ, ದಿನೇಶ್‌ ಪವಾರ, ನಿತಿನ್‌ ಪಾಟೀಲ, ಗುರುರಾಜ ಸಾಹುಕಾರ, ಡಾ| ಬಾಬುರಾವ್‌ ಶೇರಿಕಾರ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next