Advertisement

ಸಿಎಂ ಪರಿಹಾರ ನಿಧಿಗೆ 5 ಕೋಟಿ ರೂ., 1 ಲಕ್ಷ N-95 ಮಾಸ್ಕ್ ನೀಡಿದ ಅಪೆಕ್ಸ್ ಬ್ಯಾಂಕ್

11:35 AM May 12, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆಯನ್ನು ಅಪೆಕ್ಸ್ ಬ್ಯಾಂಕ್ ನೀಡಿದ್ದು, ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ಎಂದು ಮುಖ್ಯಮಂತ್ರಿಗಳಿಗೆ ಚೆಕ್ಕನ್ನು ಹಸ್ತಾಂತರಿಸಿದರು.

Advertisement

ಇದೇ ವೇಳೆ 1 ಲಕ್ಷ N-95 ಮಾಸ್ಕ್ ಅನ್ನು ಸಹ ಮುಖ್ಯಮಂತ್ರಿಗಳಿಗೆ ಅಪೆಕ್ಸ್ ಬ್ಯಾಂಕ್ ವತಿಯಿಂದ ನೀಡಲಾಯಿತು. ಈ ವೇಳೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರೂ ಆದ ಶಾಸಕ ಬೆಳ್ಳಿಪ್ರಕಾಶ್, ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷರಾದ ರಾಜೇಂದ್ರ ಕುಮಾರ್, ಅಪೆಕ್ಸ್ ಬ್ಯಾಂಕ್ ಎಂಡಿ ಸಿ.ಎನ್.ದೇವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸರ್ಕಾರಕ್ಕೆ ಬೇಕಿದೆ ಇಂತಹ ನೆರವಿನ ಹಸ್ತ: ಕೋವಿಡ್ ಎರಡನೆಯ  ಬಹಳ ಗಂಭೀರವಾಗಿ ಪರಿಣಾಮವನ್ನು ಬೀರುತ್ತದೆ. ಇದರ ನಿರ್ವಹಣೆ ಸರ್ಕಾರಗಳಿಗೂ ಒಂದು ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಸಹಕಾರ ಸಂಸ್ಥೆಗಳು ಸರ್ಕಾರದ ನೆರವಿಗೆ ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಅಪೆಕ್ಸ್ ಬ್ಯಾಂಕ್ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದಂತೆ ಇತರ ಸಂಘ ಸಂಸ್ಥೆಗಳು, ಖಾಸಗಿ ಕಂಪನಿಗಳು ಮುಂದಾಗಬೇಕಿದೆ. ಆ ಮೂಲಕ ಸಾರ್ವಜನಿಕ ಹಿತಾಸಕ್ತಿಗೆ ಇಂತಹ ಹಣ ಬಳಕೆಯಾಗಲು ಕಾರಣವಾಗಬೇಕಿದೆ. ನಾನು ಸಹ ಮೈಸೂರು ಮೃಗಾಲಯ ನಿರ್ವಹಣೆಗೆ ದಾನಿಗಳು ನೆರವು ನೀಡಬೇಕೆಂದು ನಿನ್ನೆಯಷ್ಟೇ ಮೈಸೂರಿನಲ್ಲಿ ಮನವಿ ಮಾಡಿದ್ದೆ. ಹೀಗೆ ಉದಾರಿಗಳ ನೆರವಿನಿಂದ ಇಂತಹ ಮಹಾಮಾರಿ ಎದುರಿಸಲು ಸಾಧ್ಯವಾಗುತ್ತದೆ ಎಂದು ಸಚಿವ ಎಸ್. ಟಿ. ಸೋಮಶೇಖರ್ ಅವರು ಸುದ್ದಿಗಾರರಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next