Advertisement

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

09:14 PM Nov 20, 2024 | Team Udayavani |

ಬೆಳಗಾವಿ: ಸಚಿವ ಸಂಪುಟ ಪುನಾರಚನೆ ನನ್ನ ಗಮನಕ್ಕೆ ಬಂದಿಲ್ಲ, ಖಾತೆ ಬದಲಾವಣೆ ಚರ್ಚೆ ಆಗಿಲ್ಲ ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, 80 ಸಾವಿರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡುವ ಬದಲಿಗೆ ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್‌, ಬಿಪಿಎಲ್‌ ಇದ್ದವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತದೆ. ಇಡೀ ದೇಶದಲ್ಲಿ ಶಾಸಕರ ಖರೀದಿ ವ್ಯವಹಾರ ನಡೆಯುತ್ತಿದೆ. ಬಿಜೆಪಿಯವರು ನಿರಂತರವಾಗಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ.

ಕಾಂಗ್ರೆಸ್‌ ಶಾಸಕರು ಗಟ್ಟಿಯಾಗಿದ್ದಾರೆ. ಸುಭದ್ರವಾಗಿರುವ ಸರ್ಕಾರವನ್ನು ಯಾರೂ ಏನೂ ಮಾಡುವುದಕ್ಕೆ ಸಾಧ್ಯವಿಲ್ಲ. ಬೆಳಗಾವಿ ಜಿಲ್ಲೆ ವಿಭಜನೆ ಈ ಕುರಿತು ಎಲ್ಲ ಶಾಸಕರ ಜತೆ ಒಂದು ಸುತ್ತು ಮಾತನಾಡಲಾಗಿದೆ. ಚಳಿಗಾಲದ ಅ ಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next