Advertisement
ಈ ಕಾಯ್ದೆಯಿಂದ ಎಪಿಎಂಸಿಗೆ ಯಾವುದೇ ಧಕ್ಕೆ ಇಲ್ಲ. ಮೊದಲು 1 ರೂ. ಸೆಸ್ ನಿಗದಿ ಮಾಡಿದ್ದೆವು. ಕೊನೆಗೂ ದರವೂ ಹೆಚ್ಚಾಯಿತು ಎಂಬ ಮನವಿಗಳು ಬಂದ ಹಿನ್ನೆಲೆಯಲ್ಲಿ ನಾವು ಸಂಪುಟದಲ್ಲಿ ಚರ್ಚೆ ನಡೆಸಿ 35 ಪೈಸೆಗೆ ನಿಗದಿ ಮಾಡಿದೆವು. ಇಷ್ಟಾದರೂ ಎಪಿಎಂಸಿಗೆ ವರ್ಷಕ್ಕೆ 120 ಕೋಟಿ ರೂ. ಆದಾಯ ಬರುತ್ತದೆ. ಇದರಿಂದ ವ್ಯವಸ್ಥೆ ಮೇಲೆ ಯಾವುದೇ ಪರಿಣಾಮ ಬೀರದು. ಅಲ್ಲದೆ, ಎಪಿಎಂಸಿಯ ಅಧಿಕಾರ ಮೊಟುಕುಗೊಳ್ಳುವುದಿಲ್ಲ, ಇದನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವರಾದ ಸೋಮಶೇಖರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Related Articles
Advertisement
ಸ್ಥಳೀಯ ಎಪಿಎಂಸಿಗೆ ಅಧಿಕಾರ ಇಲ್ಲದಿದ್ದರೂ ರಾಜ್ಯ ಎಪಿಎಂಸಿ ಬೋರ್ಡ್ ಗೆ ಸಂಪೂರ್ಣ ಅಧಿಕಾರ ಇದೆ. ಹೀಗಾಗಿ ಮಲ್ಟಿ ನ್ಯಾಷನಲ್ ಕಂಪನಿಗಳು ಅಕ್ರಮ ಎಸಗುತ್ತಿದ್ದರೆ, ಹಣವನ್ನು ರೈತರಿಗೆ ಸರಿಯಾಗಿ ನೀಡದಿದ್ದರೆ ದೂರು ಕೊಟ್ಟರೆ ಅಂಥವರ ಪರವಾನಗಿಯನ್ನೇ ರದ್ದುಪಡಿಸುತ್ತೇವೆ ಎಂದು ತಿಳಿಸಿದರು.
ರೈತರ ಪ್ರತಿಭಟನೆ ಬಗ್ಗೆ ಸರ್ಕಾರ ಸಹ ಗಮನಹರಿಸುತ್ತಿದೆ. ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಕೊಡುವಂತೆ ಮುಖ್ಯಮಂತ್ರಿಗಳು ಸಹ ತಿಳಿಸಿದ್ದಾರೆ. ಹೀಗಾಗಿ ನಾನೂ ಸಹ ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇನೆ. ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ : ತನ್ನ ಅಂಗಡಿ ಮುಂದೆ ಉಗುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ಇರಿದು ವ್ಯಕ್ತಿಯ ಕೊಲೆ
ಶಿರಾ ಚುನಾವಣೆಯಲ್ಲಿ ಬಿಜೆಪಿ ಪರ ಅಲೆ
ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಈ ಬಾರಿ ವಿಜಯ ಸಾಧಿಸಲಿದೆ. ಪಕ್ಷದ ಪರ ಪೂರಕ ವಾತಾವರಣ ಕ್ಷೇತ್ರದಲ್ಲಿ ನಿರ್ಮಾಣವಾಗಿದೆ. 264 ಬೂತ್ ಗಳಲ್ಲಿ ಕಮಿಟಿ ರಚಿಸಿ, ವಾಟ್ಸಪ್ ಗ್ರೂಪ್ ಮಾಡುತ್ತೇವೆ. ಅಕ್ಟೋಬರ್ 2 ರಂದು 2 ಸಭೆ ಮಾಡಿ, 2 ಹಂತಗಳಲ್ಲಿ ಸಭೆ ನಡೆಸುತ್ತೇವೆ. ಸಂಜೆ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪ್ರತಿ ಬೂತ್ ಗೆ ತಲಾ 5 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತೇವೆ ಎಂದು ಬಿಜೆಪಿ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ರವಿಕುಮಾರ್ ಅವರು ಹೇಳಿದರು.
ಇದನ್ನೂ ಓದಿ :ತಡರಾತ್ರಿ ದಟ್ಟ ಕಾಡಿನಲ್ಲಿ ಕಾರಿನೊಳಗೆ 6 ತಾಸು ಕಳೆದ ಮೂವರನ್ನು ರಕ್ಷಿಸಿದ ಪೊಲೀಸ್ ಅಧಿಕಾರಿ
ಈ ಬಾರಿ ಶಿರಾದಲ್ಲಿ ಬಿಜೆಪಿ ಅಲೆ ಇದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಮೇಲೆ ಬಿಜೆಪಿ ಅಭ್ಯರ್ಥಿಯ ಘೋಷಣೆ ಮಾಡಲಾಗುವುದು. ಪಕ್ಷದಲ್ಲಿ 8 ಮಂದಿಗೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಇದೇ ತಿಂಗಳ 25ರಂದು ದೀನ ದಯಾಳ್ ಉಪಾಧ್ಯಾಯ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಅವರ ಧ್ಯೇಯೋದ್ದೇಶವಾದ ಅಂತ್ಯೋದಯ ಎಂಬ ಆಶಯಕ್ಕೆ ಬಿಜೆಪಿ ಬದ್ಧವಾಗಿದೆ. ಕೊನೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ರವಿಕುಮಾರ್ ರವರು ತಿಳಿಸಿದರು.