Advertisement

ಎಪಿಎಂಸಿ ಚುನಾವಣೆ ಸೆಮಿಫೈನಲ್‌ ಇದ್ದಂತೆ

03:33 PM Feb 17, 2017 | Team Udayavani |

ಸೇಡಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಈಗ ನಡೆಯಲಿರುವ ಎಪಿಎಂಸಿ ಚುನಾವಣೆ ಸೆಮಿಫೈನಲ್‌ ಇದ್ದಂತೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಬಿಜೆಪಿ ಘಟಕ ಆಯೋಜಿಸಿದ್ದ ಎಪಿಎಂಸಿ ಚುನಾವಣೆ ಪೂರ್ವಭಾವಿ ಸಭೆ ಮತ್ತು ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. 

Advertisement

ಮುಂದಿನ ವಿಧಾನಸಭೆ ಚುನಾವಣೆ ಎಪಿಎಂಸಿ ಚುನಾವಣೆ ಫಲಿತಾಂಶದ ಮೇಲೆ ಅವಲಂಬಿತವಾಗುತ್ತದೆ. ಆಯಾ ಕ್ಷೇತ್ರಗಳ ಜನರ ಅಭಿಪ್ರಾಯದ ಮೇರೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಉದ್ದೇಶ ಹೊಂದಲಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು. 

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆ, ರೈತರ ಶ್ರೇಯಸ್ಸಿಗಾಗಿ  ಜಾರಿಗೊಳಿಸಿರುವ ಯೋಜನೆಗಳನ್ನು ಪ್ರತಿ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ನಡೆದಿದೆ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಮಿಷನ್‌ 150 ಕನಸು ನನಸು ಮಾಡುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತನ ಮೇಲಿದೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಕೇವಲ ಕಾಲಹರಣ ಮಾಡುತ್ತಿದೆ. ಇಂತಹ ಸರ್ಕಾರ ಕಿತ್ತೂಗೆಯುವ ಪಣ ತೊಡಬೇಕು ಎಂದು ಹೇಳಿದರು. ಮಾಜಿ ಉಪ ಸಭಾಪತಿ ಚಂದ್ರಶೇಖರರೆಡ್ಡಿ ದೇಶಮುಖ ಮದನಾ,  ಮುಖಂಡ ಬಸವರಾಜ ರೇವಗೊಂಡ ಮಾತನಾಡಿದರು. 

ಪಕ್ಷದ ತಾಲೂಕು ಅಧ್ಯಕ್ಷ ನಾಗಪ್ಪ ಕೊಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ನಿಲಂಗಿ, ನಗರಾಧ್ಯಕ್ಷ ಅನೀಲ  ಐನಾಪುರ, ಜಿಪಂ ಮಾಜಿ ಸದಸ್ಯ ಶ್ರೀನಾಥ ಪಿಲ್ಲಿ, ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಚವ್ಹಾಣ, ಉಪಾಧ್ಯಕ್ಷೆ ಕಮಲಾಬಾಯಿ ಹೂಗಾರ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ನಾಗರೆಡ್ಡಿ ಮದನಾ,

Advertisement

ತಾಲೂಕು ಅಧ್ಯಕ್ಷ ಡಾ| ಮುರುಗೇಂದ್ರರೆಡ್ಡಿ ಬಿಲಾಕಲ್‌, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ನಿಷ್ಠಿ, ತಾಲೂಕು ಅಧ್ಯಕ್ಷೆ ಪಲ್ಲವಿ  ಪಾಟೀಲ, ಮುಖಂಡರಾದ ಚನ್ನಬಸಪ್ಪ ನಿರ್ಣಿ, ಡಾ| ಮೋಹನರೆಡ್ಡಿ ಇಟಕಾಲ, ಡಾ| ಸಿರಾಜೋದ್ದಿನ್‌ ಇದ್ದರು. ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಓಂಪ್ರಕಾಶ ಪಾಟೀಲ ಸ್ವಾಗತಿಸಿದರು. ಹಣಮಂತರೆಡ್ಡಿ ನಿರೂಪಿಸಿದರು.  

Advertisement

Udayavani is now on Telegram. Click here to join our channel and stay updated with the latest news.

Next