Advertisement
ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದಂತೆ 28 ಅಭ್ಯರ್ಥಿಗಳು ಹಾಗೂ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದ 24 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಚಾಮರಾಜನಗರ ಮತ್ತು ಯಳಂದೂರು ತಾಲೂಕುಗಳು ಒಳಪಡಲಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 135 ಮತಗಟ್ಟೆಗಳನ್ನು ಸ್ಥಾಪಿಸಲಾಗಿರುತ್ತದೆ. ಒಟ್ಟು 1,49,665 ಮತದಾರರಿದ್ದು, ಈ ಪೈಕಿ 1,11,636 ಪುರುಷರು ಮತ್ತು 38,029 ಮಹಿಳಾ ಮತದಾರರಿರುತ್ತಾರೆ.
Related Articles
Advertisement
ನೇಮಕ ಮಾಡಿರುವ ಮತಗಟ್ಟೆ ಅಧಿಕಾರಿಗಳಿಗೆ ಈಗಾಗಲೇ ಮತದಾನ ನಡೆಸುವ ಕುರಿತು ತಾಲೂಕು ಮಟ್ಟದ ನುರಿತ ಮಾಸ್ಟರ್ ಟ್ರೆçನರ್ಗಳ ಮೂಲಕ ತರಬೇತಿಯನ್ನು ನೀಡಲಾಗಿರುತ್ತದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಯನ್ನು ಮತಪೆಟ್ಟಿಗೆ ಬಳಸಿ ನಡೆಸಲಾಗುತ್ತಿರುವುದರಿಂದ, ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 270 ಹಾಗೂ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 130 ರಾಜ್ಯ ಚುನಾವಣಾ ಆಯೋಗದ ಮತಪೆಟ್ಟಿಗೆಗಳನ್ನು ಮತದಾನಕ್ಕೆ ಬಳಸಿಕೊಳ್ಳಲಾಗುತ್ತಿದೆ.
ಮತಗಟ್ಟೆಗಳಿಗೆ ನೇಮಕ ಮಾಡಿರುವ ಮತದಾನಾಧಿಕಾರಿಗಳನ್ನು ಮತದಾನ ಕೇಂದ್ರಕ್ಕೆ ಕರೆದುಕೊಂಡು ಹೋಗಲು ಚಾಮರಾಜನಗರಕ್ಕೆ 19 ಮತ್ತು ಗುಂಡ್ಲು ಪೇಟೆಗೆ 9 ಕೆ.ಎಸ್.ಆರ್.ಟಿ.ಸಿ. ಬಸ್ಸುಗಳನ್ನು ಹಾಗೂ ಕ್ರಮವಾಗಿ 10 ಮತ್ತು 8 ಜೀಪ್‌ಗ್ಳನ್ನು ಬಳಸಿಕೊಳ್ಳ ಲಾಗುತ್ತಿದೆ. ಏ. 17ರ ಭಾನುವಾರದಂದು ನಡೆಯುವ ಚುನಾವಣೆಯಲ್ಲಿ ಒಬ್ಬ ಮತದಾರರು ಒಂದು ಮತ ಚಲಾಯಿಸಲು ಮಾತ್ರ ಅವಕಾಶವಿರುತ್ತದೆ. ಏ. 20ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯವು ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕು ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಎಣಿಕೆ ಕೇಂದ್ರದಲ್ಲಿ ನಡೆಯಲಿದ್ದು, ಪ್ರತಿ ಕ್ಷೇತ್ರಕ್ಕೆ ತಲಾ ಒಂದು ಟೇಬಲ್‌ನಂತೆ ಒಟ್ಟು 12 ಟೇಬಲ್‌ಗಳ ವ್ಯವಸ್ಥೆ ಮಾಡಲಾಗುತ್ತದೆ.
ಎಣಿಕೆ ಕಾರ್ಯಕ್ಕಾಗಿ ಪ್ರತಿ ಟೇಬಲ್ ಗೆ ಒಬ್ಬರು ಮೇಲ್ವಿಚಾರಕರು ಮತ್ತು ಇಬ್ಬರು ಸಹಾಯಕರನ್ನು ನಿಯೋಜಿಸಿಕೊಂಡು ತರಬೇತಿ ನೀಡಲಾಗುತ್ತದೆ. ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಸಾರ್ವ ಜನಿಕರು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಹಾಗು ಜಿಲ್ಲಾ ಚುನಾವಣಾ ಧಿಕಾರಿಗಳಾಗಿರುವ ಚಾರುಲತಾ ಸೋಮಲ್ ಕೋರಿದ್ದಾರೆ.
ಚುನಾವಣೆ :ಬಸ್ ವ್ಯವಸ್ಥೆ : ಚಾಮರಾಜನಗರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ 2022ರ ಸಂಬಂಧ ಏ. 16ರಂದು ನಗರದ ಸತ್ತಿ ರಸೆಯಲ್ಲಿರುವ ಯೂನಿ ವರ್ಸ್ ಶಾಲೆಯಲ್ಲಿ ನಡೆಯುವ ಮಸ್ಟರಿಂಗ್ ಕೇಂದ್ರಕ್ಕೆ ಮತಗಟ್ಟೆ ಅಧಿಕಾರಿಗಳು ತೆರಳಲು ಚಾಮರಾಜನಗರ ತಾಲೂಕು ಕಚೇರಿಯಿಂದ ಬೆಳಗ್ಗೆ 7ರಿಂದ 10ಗಂಟೆಯವರೆಗೆ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ ಎಂದು ಚುನಾವಣಾಧಿಕಾರಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.