Advertisement

ಎಪಿಎಂಸಿ ಫ‌ಲಿತಾಂಶ: ವಿಧಾನಸಭಾ ಚುನಾವಣೆಗೆ ದಿಕ್ಸೂಚಿ

03:45 AM Jan 16, 2017 | |

ಬೆಂಗಳೂರು: ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸಿಕ್ಕಿರುವ ಬಹುಮತ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚಿತ್ರಸಂತೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿದ ಮತದಾರರನ್ನು ಅಭಿನಂದಿಸುತ್ತೇನೆ. ಈ ಗೆಲುವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಮುನ್ಸೂಚನೆ ನೀಡಿದೆ ಎಂದರು.

ಬಿಜೆಪಿಯ ಆಂತರಿಕ ಜಗಳದಿಂದ ಕಾಂಗ್ರೆಸ್‌ ಪಕ್ಷಕ್ಕೆ ಲಾಭ ಆಗುವುದು ಸಹಜ. ಈಗಲೇ ಕಚ್ಚಾಡುತ್ತಿರುವ ಬಿಜೆಪಿ ನಾಯಕರು ಒಂದೊಮ್ಮೆ ಅಧಿಕಾರ ಸಿಕ್ಕರೆ ಇನಾéವ ರೀತಿ ಕಚ್ಚಾಡಬಹುದು ಎಂದು ಅಂದಾಜು ಮಾಡುವಷ್ಟು ಜನ ಬುದ್ಧಿವಂತರಾಗಿದ್ದಾರೆ. ರಾಜ್ಯದ ಜನತೆ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಸಿಗುವುದು ಖಚಿತ. ಹಾಗೆಂದು ಬಿಜೆಪಿಯ ಒಳಜಗಳನ್ನು ನೋಡಿಕೊಂಡು ನಾವು ಸುಮ್ಮನೆ ಕೂರುವುದಿಲ್ಲ ಎಂದರು.

ಮಹದಾಯಿ ನದಿಯಿಂದ ಕುಡಿಯಲಿಕ್ಕೆ 7.56 ಟಿಎಂಸಿ ನೀರು ಪಡೆದುಕೊಳ್ಳಲು ಸುಪ್ರೀಂಕೋರ್ಟ್‌ ಆದೇಶದಂತೆ ನ್ಯಾಯಾಧೀಕರಣಕ್ಕೆ ಮತ್ತೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next