ಮುಂಜಾನೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಇದರ ಬೆನ್ನಲ್ಲೇ ಅವರು ಪಕ್ಷ ಸಂಘಟನೆಗೆ ಮುಂದಾಗಿದ್ದು, ಬುಧವಾರ ಮತ್ತು ಗುರುವಾರ ಸ್ವಕ್ಷೇತ್ರ ರಾಮನಗರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
Advertisement
ನಂತರ ಪಕ್ಷದ ಸಂಘಟನೆಗಾಗಿ ರಾಜ್ಯ ಪ್ರವಾಸದ ರೂಪು-ರೇಷೆ ಕುರಿತು ಚರ್ಚಿಸಲು ಮೂರು ದಿನಗಳ ಕಾಲ ಪಕ್ಷದ ಶಾಸಕರು ಹಾಗೂ ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದಾರೆ. ಫೆಬ್ರವರಿಯಿಂದ ಅವರು ರಾಜ್ಯ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದ್ದು, ಈಗಾಗಲೇ ವಿಭಾಗಾವಾರು ರಚಿಸಲಾಗಿರುವ ತಂಡಗಳು ಹಾಗೂ ನೂತನ ಕೋರ್ ಕಮಿಟಿ ಜತೆ ಚರ್ಚಿಸಿದ ನಂತರ ಜಿಲ್ಲಾವಾರು ಸಭೆಗಳ ಪಟ್ಟಿ ಸಿದ್ಧವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಮಾಣದಲ್ಲಿ ಪಕ್ಷ ಗೆಲುವು ಸಾಧಿಸದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾ ಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚು ಸ್ಥಾನ ಗೆಲ್ಲದ ಬಗ್ಗೆ ಸ್ಥಳೀಯ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು ಎಂದು ಹೇಳಲಾಗಿದೆ. “ವಿಧಾನಸಭೆ ಚುನಾವಣೆ ದಿಕ್ಸೂಚಿ ಎಂದೇ ಭಾವಿಸಲಾದ ಎಪಿಎಂಸಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ನಮ್ಮ ಸಾಮರ್ಥ್ಯ ತೋರಿಸಬೇಕಿತ್ತು. ಆದರೆ, ಒಟ್ಟಾರೆ, 3ನೇ ಸ್ಥಾನ ಪಡೆದಿರುವುದು ಸಮಾಧಾನ ತಂದಿಲ್ಲ. ಪಕ್ಷದ ಸ್ಥಳೀಯ ಮಟ್ಟದ ನಾಯಕರು ಮತ್ತಷ್ಟು ಶ್ರಮ ಹಾಕಬಹುದಿತ್ತು ಎಂದು ಹೇಳಿದರು ಎಂದು ತಿಳಿದು ಬಂದಿದೆ.