Advertisement

ಮಾಜಿ ಸಚಿವ ಅಪ್ಪಾಜಿ ನಾಡಗೌಡಗೆ ಕೋವಿಡ್-19 ಸೋಂಕು

02:43 PM Aug 20, 2020 | keerthan |

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಮಾಜಿ ಸಚಿವ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

Advertisement

ಈ ಕುರಿತು ಸ್ವತಃ ಫೇಸಬುಕ್ ನಲ್ಲಿ ಪೋಸ್ಟ್ ಮಾಡಿರುವ ನಾಡಗೌಡ, ಕೋವಿಡ್-19 ಸೋಂಕು ಪರೀಕ್ಷೆ ಮಾಡಿಸಿಕೊಂಡಿರುವ ನನ್ನ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣ ಇಲ್ಲದಿದ್ದರೂ, ಮುನ್ನೆಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗೃತೆ ವಹಿಸಿ ಎಂದು ಕೋರುತ್ತೇನೆ ಎಂದು ಮಾಜಿ ಸಚಿವರು ಸಾರ್ವಜನಿಕ ಮಾಹಿತಿಗಾಗಿ ಪೋಸ್ಟ್ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next