Advertisement

ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ

02:15 PM Jul 17, 2019 | Suhan S |

ಗದಗ: ಹಡಪದ ಅಪ್ಪಣ್ಣನವರ ವಚನ ಸಂದೇಶಗಳು ಸಾರ್ವಕಾಲಿಕವಾಗಿದ್ದು, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ ಹೇಳಿದರು.

Advertisement

ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಶರಣ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ್ದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ|ತೋಂಟದ ಸಿದ್ಧರಾಮ ಸ್ವಾಮೀಜಿ ಆಶೀರ್ವಚನ ನೀಡಿ, ಶಿವಶರಣ ಅಪ್ಪಣ್ಣವರು ಬಸವಣ್ಣನವರ ಸಮಕಾಲೀನರು. 12ನೇ ಶತಮಾನದಲ್ಲಿ ನಡೆದ ವಚನ ಚಳವಳಿಯು ಜಾಗತಿಕ ಇತಿಹಾಸದಲ್ಲಿಯೇ ಶ್ರೇಷ್ಠ ಚಳುವಳಿಯಾಗಿತ್ತು ಎಂದರು.

ಗದಗ ತಾಲೂಕು ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರಕಾಶ ಅಸುಂಡಿ ಅವರು ಹಡಪದ ಅಪ್ಪಣ್ಣನವರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದರು.

ಸಮಾರಂಭದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರಮುಖರು ಹಾಗೂ ಎಸ್‌ಎಸ್‌ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Advertisement

ತಾ.ಪಂ. ಉಪಾಧ್ಯಕ್ಷೆ ಸುಜಾತಾ ಖಂಡು, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ತಹಶೀಲ್ದಾರ್‌ ಶ್ರೀನಿವಾಸ ಕುಲಕರ್ಣಿ, ನಿರ್ಮಿತಿ ಕೇಂದ್ರ ಗಂಗಾಧರ ಶಿರೋಳ, ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಮೋಹನ ಚಂದಪ್ಪನವರ, ಹಡಪದ ಅಪ್ಪಣ್ಣ ಸಮಾಜ ಸೇವಾ ಹುಲಕೋಟಿ ಸಂಘದ ಅಧ್ಯಕ್ಷ ಕಲ್ಲಪ್ಪ ಹಡಪದ, ಟಿ.ವೈ. ಹಡಪದ ವೇದಿಕೆ ಮೇಲಿದ್ದರು. ಅರ್ಜುನ ಗೊಳಸಂಗಿ ಸ್ವಾಗತಿಸಿದರು. ಎ.ವಿ. ಪ್ರಭು ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next