Advertisement

ಹಲ್ಲೆ ವಿರುದ್ಧ ಕ್ರಮಕ್ಕೆ ಮನವಿ

12:39 PM Feb 19, 2020 | Team Udayavani |

ರಾಮದುರ್ಗ: ಪಿಡಿಒ ಹಾಗೂ ಗ್ರಾಪಂ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಮಾನಸಿಕ ಕಿರುಕುಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅ ಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾ ಹಾಗೂ ತಾಲೂಕಾ ಘಟಕದಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

Advertisement

ಸರಕಾರದ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಕಾಮಗಾರಿಯ ಬಿಲ್‌ಗ‌ಳನ್ನು, ಸೌಲಭ್ಯಗಳನ್ನು ಒದಗಿಸುವ ಪ್ರಕರಣಗಳಲ್ಲಿ ಸಾರ್ವಜನಿಕರು ಮತ್ತು ಗ್ರಾಮ ಪಂಚಾಯತ ಸದಸ್ಯರ ಮಧ್ಯ ಇರುವ ಆಂತರಿಕ ಭಿನ್ನಾಭಿಪ್ರಾಯ ಹಾಗೂ ರಾಜಕೀಯ ವೈಷಮ್ಯ ಸಂದರ್ಭಗಳಲ್ಲಿ ಪಿಡಿಒಗಳು, ಗ್ರೇಡ್‌-1 ಮತ್ತು 2 ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಸಾರ್ವಜನಿಕರು ಹಾಗೂ ಜನಪ್ರತಿ ನಿಧಿಗಳಿಂದ ಹಲ್ಲೆಗೊಳಗಾಗುತ್ತಿರುವ ಸುದ್ದಿ ಕೇಳಿಬರುತ್ತಿರುವುದು ಕಳವಳಕಾರಿ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಒತ್ತಡದಿಂದ ಪಿಡಿಒ ಹಾಗೂ ಕಾರ್ಯದರ್ಶಿಗಳು ಆತ್ಮಹತ್ಯೆ ಮಾಡಿಕೊಂಡ ಹಲವಾರು ಪ್ರಕರಣಗಳು ವರದಿಯಾಗಿದ್ದರೂ ಇಲಾಖೆಯಾಗಲಿ ಅಥವಾ ಸರಕಾರವಾಗಲಿಈ ಬಗ್ಗೆ ವಿಶೇಷ ಗಮನ ಹರಿಸದಿರುವದು ವಿಪರ್ಯಾಸ. ಆದ್ದರಿಂದ ಇಂತಹ ಪ್ರಕರಣಗಳು ಮರುಕಳಿಸದಂತೆ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾದವರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸರಕಾರ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಕೂಡಲೇ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಪಿಡಿಒ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ವನಕ್ಯಾಳ, ಆರ್‌.ಡಿ.ಪಿ.ಆರ್‌ ಉಪಾಧ್ಯಕ್ಷ ಮಂಜುನಾಥ ದೇವರಡ್ಡಿ, ಪಿಡಿಒಗಳಾದ ಶೇಖರ್‌ ಹಿರೇಸೋಮಣ್ಣವರ, ಮಂಜುನಾಥ ಮೊಕಾಶಿ, ಜಯಗೌಡ ಪಾಟೀಲ, ಈರನಗೌಡ ಪಾಟೀಲ, ಆರ್‌.ಬಿ. ರಕ್ಕಸಗಿ, ಅರ್ಜುನ ಬಡಿಗೇರ, ಆರ್‌.ವಿ. ಅಂಗಡಿ ಹಾಗೂ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next