Advertisement

ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮನವಿ

03:50 PM Sep 29, 2019 | Suhan S |

ತುಮಕೂರು: ಬಿಜಾಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕು ಅಸಂತಪೂರು ಗ್ರಾಮದ ಮಾದಿಗ ಜನಾಂಗದ ಪಿಯುಸಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭೀಮ್‌ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಎನ್‌.ರವಿಕುಮಾರ್‌ ಒತ್ತಾಯಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೀಮ್‌ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಎನ್‌. ರವಿಕುಮಾರ್‌ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪಗೆ ಮನವಿ ಸಲ್ಲಿಸಿ, ಕೊಲೆಯಾದ ದಲಿತ ವಿದ್ಯಾರ್ಥಿನಿ ರೇಣುಕಾ ಮಾದರ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಮಗಳನ್ನು ಮಡಿವಾಳಪ್ಪ ಬಡಿಗೇರ್‌ ಹಾಗೂ ಇತರೆ 6 ಜನ ಸೇರಿ ಅಪಹರಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದರೂ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಳ್ಳದೆ ಗದರಿಸಿ ಕಳುಹಿಸಿದ್ದಾರೆ. ಕೂಡಲೇ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next