Advertisement
ಪುರಸಭೆ ವತಿಯಿಂದ 2016-17ನೇ ಸಾಲಿನ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಸಾವಿರ ಲೀ. ಶುದ್ಧ ನೀರಿನ ಘಟಕವನ್ನು 7 ಲಕ್ಷ ರೂ. ಅಂದಾಜು ಮೊತ್ತದಲ್ಲಿ ನಿರ್ಮಿಸಲಾಗಿದೆ. ಈ ಶುದ್ಧ ನೀರಿನ ಘಟಕ ಸ್ಥಗಿತವಾಗಿರುವುದರಿಂದ ಸುತ್ತಮುತ್ತಲಿನ ವ್ಯಾಪಾರಿಗಳು, ವಾರ್ಡ್ ಜನರಿಗೆ ಸಮಸ್ಯೆಯಾಗಿದೆ. ನೀರಿಗಾಗಿ ಜನ ಬೇರೆ ಘಟಕಗಳಿಗೆ ತೆರಳುವ ಸ್ಥಿತಿ ನಿರ್ಮಾಣವಾಗಿದೆ.
Related Articles
Advertisement
ಸರ್ವರಿಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ಆಶಯೊಂದಿಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣವಾಗಿದೆ. ಕುಡಿಯುವ ನೀರಿನ ಘಟಕಗಳು ನಿಂತು ಹೋದರೆ ತಕ್ಷಣ ಅಧಿಕಾರಿಗಳು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಮ್ಮ ವಾರ್ಡ್‌ನಲ್ಲಿ ಕಳೆದ 6 ತಿಂಗಳಿಂದ ಶುದ್ಧ ನೀರಿನ ಘಟಕ ಸ್ಥಗಿತಗೊಂಡಿದೆ. ಎಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಿಲ್ಲ. ಬೇರೆ ಕಡೆ ಹೋಗಿ ನೀರನ್ನು ತೆಗೆದುಕೊಂಡು ಬರುವ ಸ್ಥಿತಿ ಬಂದಿದೆ. ಇನ್ನಾದರೂ ಸಂಬಂಧಿತರು ಸಮಸ್ಯೆ ಬಗೆಹರಿಸಿ ನೀರಿನ ಘಟಕವನ್ನು ಪುನಃ ಪ್ರಾರಂಭಿಸಬೇಕು. -ಅಯಾಜ್ ಅಲಿ, ವಾರ್ಡ್ ನಿವಾಸಿ
ನಾನು ಹೊಸದಾಗಿ ಪುರಸಭೆಗೆ ಬಂದಿದ್ದೇನೆ, ಸಮಸ್ಯೆಯ ಕುರಿತು ಈಗ ನಮ್ಮ ಗಮನಕ್ಕೆ ಬಂದಿದೆ. ಸಂಬಂಧಿ ತ ಗುತ್ತಿಗೆದಾರರಿಗೆ ಮಾತನಾಡಿ, ಶೀಘ್ರದಲ್ಲಿ ನೀರಿನ ಘಟಕವನ್ನು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಲಾಗುವುದು. ಲಕ್ಷ್ಮೀಬಾಯಿ, ಪುರಸಭೆ ಮುಖ್ಯಾಧಿಕಾರಿ
-ಚೆನ್ನಕೇಶವಲು ಗೌಡ