Advertisement

ಶುದ್ದ ಕುಡಿಯುವ ನೀರಿಗಾಗಿ ಪರದಾಟ!

01:26 PM May 24, 2022 | Team Udayavani |

ಗುರುಮಠಕಲ್‌: ಶುದ್ಧ ಕುಡಿವ ನೀರು ಒದಗಿಸಲು ಸರಕಾರ ಕೋಟ್ಯಂತರ ರೂ. ಖರ್ಚು ಮಾಡಿ ಆರ್‌ಒ ಪ್ಲಾಂಟ್‌ಗಳನ್ನು ಸ್ಥಾಪಿಸಿದೆ. ಆದರೆ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ದುರಸ್ತಿಗೊಳ್ಳದೇ ಜನರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

Advertisement

ಪಟ್ಟಣದ ಉಪ್ಪಾರಗಡ್ಡ ಬಡಾವಣೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದು, ಕಳೆದ 6 ತಿಂಗಳಿಂದ ಸ್ಥಗಿತಗೊಂಡಿದೆ. ದುರಸ್ತಿಗಾಗಿ ಜನಪ್ರತಿನಿಧಿಗಳಿಗೆ ಅನೇಕ ಸಲ ಮನವಿ ಮಾಡಿದರೂ ಪ್ರಯೋಜನವಾಗುತ್ತಿಲ್ಲ. ಹೆಸರಿಗೆ ಮಾತ್ರ ಆರ್‌ಓ ಪ್ಲಾಂಟ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪುರಸಭೆ ವತಿಯಿಂದ 2016-17ನೇ ಸಾಲಿನ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಸಾವಿರ ಲೀ. ಶುದ್ಧ ನೀರಿನ ಘಟಕ 7 ಲಕ್ಷ ರೂ. ಅಂದಾಜು ಮೊತ್ತದ ನಿಧಿಯಿಂದ ನಿರ್ಮಾಣ ಮಾಡಲು ಖಾಸಗಿಯವರಿಗೆ ಗುತ್ತಿಗೆ ನೀಡಿದ್ದರು. ಶುದ್ಧ ನೀರಿನ ಘಟಕ ಸ್ಥಗಿತವಾಗಿರುವುದರಿಂದ ಸುತ್ತಮುತ್ತಲಿನ ವ್ಯಾಪಾರಿಗಳು, ವಾರ್ಡ್‌ ಸುತ್ತಮುತ್ತಲಿನ ಸಾರ್ವಜನಿಕರು ಶುದ್ಧ ನೀರಿಗಾಗಿ ಬೇರೆ ಘಟಕಗಳಿಗೆ ತೆರಳುವಂತಾಗಿದೆ. ಪುರಸಭೆ ಅಧಿಕಾರಿಗಳು ಈ ಘಟಕವನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.

ಕ್ರಮ ಕೈಗೊಳ್ಳಿ: ಸಾರ್ವಜನಿಕರು ಆರೋಗ್ಯವಂತರಾಗಿ ಇರಬೇಕಾದರೆ ಸರ್ಕಾರ ಶುದ್ಧ ಕುಡಿವ ನೀರಿಗೆ ಮಹತ್ವ ನೀಡಬೇಕು. ಸರ್ವರಿಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ಆಶಯೊಂದಿಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣವಾಗಿವೆ. ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋದರೆ ತಕ್ಷಣ ಅಧಿಕಾರಿಗಳು ಕ್ರಮ ಕೈಗೊಂಡು ದುರಸ್ತಿ ಮಾಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಾನು ಪುರಸಭೆಗೆ ಹೊಸದಾಗಿ ಬಂದಿದ್ದೇನೆ. ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ. ಸಂಬಂಧಿತ ಗುತ್ತಿಗೆದಾರರೊಂದಿಗೆ ಮಾತನಾಡಿ, ಶೀಘ್ರದಲ್ಲಿ ನೀರಿನ ಘಟಕವನ್ನು ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಲಾಗುವುದು. ಲಕ್ಷ್ಮೀಬಾಯಿ, ಪುರಸಭೆ ಮುಖ್ಯಾಧಿಕಾರಿನಮ್ಮ ವಾರ್ಡ್‌ನಲ್ಲಿ 6 ತಿಂಗಳಿಂದ ಶುದ್ಧ ನೀರಿನ ಘಟಕ ಸ್ಥಗಿತಗೊಂಡಿದೆ. ಎಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಬೇರೆ ಕಡೆ ಹೋಗಿ ನೀರು ತರುವ ಸ್ಥಿತಿ ಬಂದಿದೆ. ಇನ್ನಾದರೂ ಸಂಬಂಧಿಸಿದವರು ಸಮಸ್ಯೆ ಬಗೆಹರಿಸಿ ನೀರಿನ ಘಟಕ ಪುನಃ ಪ್ರಾರಂಭಿಸಬೇಕು. -ಅಯಾಜ್‌ ಅಲಿ, ವಾರ್ಡ್‌ ನಿವಾಸಿ

Advertisement

-ಚೆನ್ನಕೇಶವಲು ಗೌಡ

Advertisement

Udayavani is now on Telegram. Click here to join our channel and stay updated with the latest news.

Next