Advertisement

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

12:40 PM Jul 14, 2020 | Suhan S |

ಬಾಗಲಕೋಟೆ: ಮಾಸಿಕ 12 ಸಾವಿರ ಕನಿಷ್ಠ ವೇತನ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಸೋಮವಾರ ಜಿಲ್ಲೆಯಾದ್ಯಂತ ತಮ್ಮ ಕೇಂದ್ರ ಸ್ಥಾನಗಳಲ್ಲಿ ಪ್ರತಿಭಟನೆ ನಡೆಸಿದರು.

Advertisement

ಆಯಾ ಗ್ರಾ.ಪಂ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡಿ, ಅಭಿವೃದ್ಧಿ ಅಧಿಕಾರಿಗಳ ಮೂಲಕ ಸಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರ ನಮಗೆ ತಿಂಗಳಿಗೆ 12 ಸಾವಿರ ರೂ. ಗೌರವಧನ ನೀಡಬೇಕು. ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಆಶಾಗಳಿಗೆ, ತಕ್ಷಣವೇ ಆರೋಗ್ಯ ಸುರಕ್ಷತೆ ಸಾಮಗ್ರಿಗಳು ನೀಡಬೇಕು. ಈ ಬಗ್ಗೆ ಮಾರ್ಚ್‌ ತಿಂಗಳಿಂದಲೇ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರೂ, ಸರ್ಕಾರ ಸ್ಪಂದಿಸುತ್ತಿಲ್ಲ. ಆದ್ದರಿಂದ ಜೂ. 30ರಿಂದ ಎರಡನೇ ಹಂತದ ಹೋರಾಟ ಆರಂಭಿಸಿದ್ದೇವೆ. ಶಾಸಕರು, ಸಂಸದರು ಹಾಗೂ ಸಚಿವರಿಂದಲೂ ಸರ್ಕಾರಕ್ಕೆ ಮನವಿ ಮಾಡಿಕೊಂಡರೂ, ಸರ್ಕಾರ ಸಮಸ್ಯೆಗೆ ಸ್ಪಂದಿಸದೇ ಇರುವುದು ಬೇಸರವಾಗಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ಅಂಜನಾ ಕುಂಬಾರ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಪಕ್ಷ ಬೇಧವಿಲ್ಲದೆ ವಿವಿಧ ಜನ ಪ್ರತಿನಿಧಿಗಳು, ರೈತರು, ಯುವಕರು, ಸಾಮಾನ್ಯ ಜನರು ನಮ್ಮ ಹೋರಾಟಕ್ಕೆ ಬೆಂಬಲಿಸಿದ್ದಾರೆ. ನಾಳೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮಾನವ ಸರಪಳಿ ರಚನೆ ಮಾಡಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next