Advertisement

ಕಲಾಪದಲ್ಲಿ ಕನ್ನಡ ಬಳಕೆಗೆ ಮನವಿ

10:28 AM Jan 03, 2020 | Suhan S |

ಬೆಂಗಳೂರು: ಹೈಕೋರ್ಟ್‌ ಕಲಾಪಗಳಲ್ಲಿ ಕನ್ನಡ ಭಾಷೆ ಬಳಸುವ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವಕೀಲರು ಮನವಿ ಸಲ್ಲಿಸಿದ್ದಾರೆ. ಈ ಕುರಿತು ವಕೀಲ ಕೆ.ಬಿ.ಕೆ.ಸ್ವಾಮಿ ನೇತೃತ್ವದ ವಕೀಲರ ತಂಡವು ವಿಧಾನಸೌಧದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

Advertisement

ಮನವಿ ಸ್ವೀಕರಿಸಿ ಮಾತನಾಡಿದ ನಾಗಾಭರಣ, ಈ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಬಗ್ಗೆ ರಾಜ್ಯದ ಎಲ್ಲ ಸಂಸದರೊಂದಿಗೆ ಚರ್ಚಿಸಲಾಗುವುದು. ನಿಮ್ಮ ಈ ಪ್ರಯತ್ನ ಅಭಿಯಾನದ ರೂಪ ಪಡೆದುಕೊಳ್ಳಬೇಕು. ಈ ವಿಚಾರದಲ್ಲಿ ಪ್ರಾಧಿಕಾರ ಸದಾ ನಿಮ್ಮೊಂದಿಗೆ ಇದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯದ ಮೂವರು ನ್ಯಾಯಮೂರ್ತಿಗಳಿದ್ದು, ಅವರ ಗಮನಕ್ಕೂ ಈ ವಿಚಾರ ತರಲಾಗುವುದು ಎಂದು ವಕೀಲರಿಗೆ ಭರವಸೆ ನೀಡಿದರು. ಕೆ.ಬಿ.ಕೆ ಸ್ವಾಮಿ ಮಾತನಾಡಿ, ಈಗಾಗಲೇ ಮಧ್ಯಪ್ರದೇಶ, ರಾಜಸ್ಥಾನ, ಬಿಹಾರ್‌ ರಾಜ್ಯ ಹೈಕೋರ್ಟ್‌ಗಳಲ್ಲಿ ಇಂಗ್ಲಿಷ್‌ ಜತೆ ಹಿಂದಿಯನ್ನು ಅಧಿಕೃತವಾಗಿ ಬಳಸಲಾಗುತ್ತಿದೆ. ಇದಕ್ಕೆ ಸಂವಿಧಾನದ 348 (2)ನೇ ವಿಧಿ ಅನುವು ಮಾಡಿಕೊಟ್ಟಿದೆ. ಇದೇ ಮಾದರಿಯನ್ನು ಕರ್ನಾಟಕ ಹೈಕೋರ್ಟ್‌ನಲ್ಲೂ ಅನುಸರಿಸಲು ಸರ್ಕಾರವನ್ನು ಕೋರಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next