Advertisement

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

12:34 AM Nov 16, 2024 | Team Udayavani |

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ನೀಡಿರುವ ಮಧ್ಯಾಂತರ ಜಾಮೀನು ಆದೇಶ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಸರಕಾರ ಅನುಮತಿ ನೀಡಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ತಿಳಿಸಿದ್ದಾರೆ.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಪ್ರಿಂಕೋ ರ್ಟ್‌ ನ ಲ್ಲಿ ಮೇಲ್ಮನವಿ ಸಲ್ಲಿಸಲು ಹಲವು ಪ್ರಕ್ರಿಯೆಗಳಿವೆ. ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲು ತಯಾರಿ ನಡೆಯುತ್ತಿದೆ ಎಂದು ತಿಳಿಸಿದರು.

ಮಧ್ಯಾಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್‌ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಬೆನ್ನು ನೋವಿಗೆ ಸರ್ಜರಿ ಮಾಡಿಸಿಕೊಳ್ಳಲು ದರ್ಶನ್‌ ಜಾಮೀನು ಪಡೆದುಕೊಂಡಿದ್ದರು. ಆದರೆ ಜೈಲಿನಿಂದ ಹೊರ ಬಂದು ಇಷ್ಟು ದಿನ ಕಳೆದರೂ ಸರ್ಜರಿಗೆ ದಿನಾಂಕ ನಿಗದಿಯಾಗಿಲ್ಲ. ದರ್ಶನ್‌ ಅವರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ರಾಜ್ಯ ಸರಕಾರದ ಅನುಮತಿಯ ಅಗತ್ಯವಿದೆ. ಇತ್ತೀಚೆಗೆ ಗೃಹ ಸಚಿವಾಲಯದಿಂದ ಅನುಮತಿ ಸಿಕ್ಕಿದೆ. ಸರಕಾರದ ಅನುಮತಿ ಸಿಕ್ಕ ಬೆನ್ನಲ್ಲೇ ಮೇಲ್ಮನವಿ ಅರ್ಜಿ ಸಿದ್ಧಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next