Advertisement

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

01:30 PM Mar 11, 2017 | Team Udayavani |

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

Advertisement

ಇದಲ್ಲದೇ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದು 2017-18ನೇ ಸಾಲಿನ ರಾಜ್ಯದ ಮುಂಗಡ ಪತ್ರದಲ್ಲಿ ರೈತರ ಸಾಲಮನ್ನಾ ಮಾಡಬೇಕು, ಅಸಂಘಟಿತ ಕಾರ್ಮಿಕರಿಗೆ ಅಂಗನವಾಡಿ, ಬಿಸಿಯೂಟ ತಯಾರಿಕರು, ಆಶಾ ಕಾರ್ಯಕರ್ತೆಯರು ಇನ್ನಿತರರ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕನಿಷ್ಠ ವೇತನ 18 ಸಾವಿರ ನಿಗದಿಪಡಿಸಬೇಕು, ಡಾ| ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು.

ಪ್ರೊ| ಎಸ್‌.ಜಿ. ಸಿದ್ದರಾಮಯ್ಯ ಸಮಿತಿ ವರದಿ ಜಾರಿಯಾಗಬೇಕು, ಕಳಸಾ-ಬಂಡೂರಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂಬ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಬಿ.ಎ. ಮುಧೋಳ, ಎನ್‌.ಎ. ಖಾಜಿ, ಎ.ಎಸ್‌. ಪೀರಜಾಧೆ,ರಮೇಶ ಭೋಸಲೆ, ಖಾಸೀಂಸಾಬ ಗೋಡೇನವರ, ಬಷೀರ ಅತ್ತಾರ,  ಸಾಜಿದ ಹಾಲಭಾವಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next