Advertisement

Udupi ಮಳೆಹಾನಿ ವಿಶೇಷ ಅನುದಾನಕ್ಕಾಗಿ ಸಿಎಂಗೆ ಮನವಿ: ಲಕ್ಷ್ಮೀ ಹೆಬ್ಬಾಳ್ಕರ್‌

12:07 AM Aug 16, 2024 | Team Udayavani |

ಉಡುಪಿ: ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.40ರಷ್ಟು ಹೆಚ್ಚು ಮಳೆಯಾಗಿ 200 ಕೋಟಿ ರೂ.ಗಳಷ್ಟು ಹಾನಿಯಾಗಿದೆ. ತುರ್ತು ಪರಿಹಾರಕ್ಕಾಗಿ ಜಿಲ್ಲಾಡಳಿತದಲ್ಲಿರುವ ಅನುದಾನದಲ್ಲಿ ಹಣ ಬಿಡುಗಡೆ ಮಾಡಿದ್ದೇವೆ. ವಿಶೇಷ ಅನುದಾನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಮಾತನಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

Advertisement

ಸ್ವಾತಂತ್ರೊéàತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಮನೆ, ರಸ್ತೆ, ಕಾಲುಸಂಕ, ಸೇತುವೆಗಳು ಸಹಿತ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಪರಿಹಾರ ಕಾರ್ಯವೂ ನಡೆಯುತ್ತಿದೆ. ಅಭಿವೃದ್ಧಿಯೆಂದರೆ ಬರೀ ರಸ್ತೆ ನಿರ್ಮಾಣ ಮಾತ್ರವಲ್ಲ. ಆಶ್ರಯ, ಅಕ್ಷರ, ಆರೋಗ್ಯ, ಅನ್ನಭಾಗ್ಯ, ಆರ್ಥಿಕ ಸಬಲೀಕರಣವೂ ಹೌದು. ವಿವಿಧ ಯೋಜನೆ, ಗ್ಯಾರಂಟಿಯಡಿ ಒಂದು ವರ್ಷದಲ್ಲಿ ಜಿಲ್ಲೆಗೆ 900 ಕೋಟಿ ರೂ. ಬಿಡುಗಡೆಯಾಗಿದೆ. ಮನುಷ್ಯನ ಜೀವನದಲ್ಲಿ ಮಂದಹಾಸ ತರುವುದೇ ಅಭಿವೃದ್ಧಿ. ವಿಪಕ್ಷದವರು ಭ್ರಮನಿರಸನಗೊಂಡಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಜಿಲ್ಲೆಯನ್ನು ನಿರ್ಲಕ್ಷಿಸಿಲ್ಲ ಎಂದು ಹೇಳಿದರು.

ಗ್ಯಾರಂಟಿ ಬದಲಾವಣೆ ಇಲ್ಲ
ಕಾಂಗ್ರೆಸ್‌ ಸರಕಾರ ಬಡವರ ಕಲ್ಯಾಣಕ್ಕಾಗಿ ಜಾರಿ ಮಾಡಿರುವ ಗ್ಯಾರಂಟಿಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಯಥಾ ಪ್ರಕಾರ ಮುಂದುವರಿ ಯಲಿದೆ. ಈ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಹಾಗೂ ಯೋಜನೆಗೆ ಕತ್ತರಿ ಪ್ರಯೋ ಗವೂ ಮಾಡುವುದಿಲ್ಲ ಎಂದರು.

ದೇವರ ಹೆಸರಿನಲ್ಲಿ ಮೋಸ
ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್‌ ಕುಮಾರ್‌, ಕರಾವಳಿ ಜನರಿಗೆ ಮೋಸ ಮಾಡಿದ್ದಾರೆ. ಪರಶುರಾಮನ ಮೂರ್ತಿ ಕಂಚಿನಧ್ದೋ ಅಥವಾ ಫೈಬರ್‌ನದ್ದೊ ಎಂಬುದು ಜಗಜ್ಜಾಹೀರಾಗಿದೆ.

ಬಿಜೆಪಿಗರುಇವರು ದೇವರನ್ನೇ ಬಿಡಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ ಎಂದು ಪ್ರಶ್ನಿಸಿದರು. ಶಾಸಕರ ಹಕ್ಕುಚ್ಯುತಿ ಬಗ್ಗೆ ಎರಡು ಬಾರಿ ಶಾಸಕಿಯಾದ ನನಗೂ ಗೊತ್ತು. ಅಧಿಕಾರದ ಲಾಭ ದುರ್ಲಾಭದ ಬಗ್ಗೆ ನನಗೂ ಸಾಮಾನ್ಯ ಜ್ಞಾನ ಇದೆ. ಯಾರ ಹಕ್ಕನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅಧಿಕಾರಿಗಳ ಸಭೆ ಎಲ್ಲಿ ಕರೆಯಬೇಕು, ಅಲ್ಲಿಯೇ ಕರೆದರೆ ಏನೂ ತೊಂದರೆ ಆಗದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next