Advertisement

Vijayanagara ಜಿಲ್ಲೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಸಿಎಂಗೆ ಮನವಿ

11:09 PM Aug 17, 2023 | Team Udayavani |

ಹೊಸಪೇಟೆ: ವಿಜಯನಗರ ಜಿಲ್ಲಾ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

Advertisement

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ವಿಜಯನಗರ ಜಿಲ್ಲಾ ಶಾಸಕರ ಸಭೆಯಲ್ಲಿ ಮನವಿ ಸಲ್ಲಿಸಿದ ಸಚಿವರು, ನೂತನ ವಿಜಯನಗರ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಬೇಕಿದೆ. ಜಿಲ್ಲಾ ಕಚೇರಿಗಳು ಅಧಿಕಾರಿ, ಸಿಬ್ಬಂದಿಗಳು ನೇಮಕ ಆಗಬೇಕಿದೆ. 19 ಇಲಾಖೆಗಳಿಗೆ ಕಚೇರಿ ಇಲ್ಲದಂತಹ ಸ್ಥಿತಿ ಇದೆ. 15 ಅಧಿಕಾರಿಗಳು ಬಳ್ಳಾರಿ, ದಾವಣಗೆರೆ, ಕೊಪ್ಪಳ ಜಿಲ್ಲೆಗಳ ಹೊಣೆಗಾರಿಕೆ ಜತೆ ವಿಜಯನಗರದ ಜವಬ್ದಾರಿಯನ್ನು ಸಹ ನಿಭಾಯಿಸಬೇಕಿದೆ. ಹೀಗಾಗಿ ಸ್ವಂತ ಕಚೇರಿ, ಅಧಿಕಾರಿ ಸಿಬ್ಬಂದಿ ನೇಮಕ ಆಗಬೇಕಿದೆ. ಇತ್ತೀಚಿಗೆ ಜಿಲ್ಲೆಯಲ್ಲಿ ನಡೆದ ತಾಲ್ಲಾಕುವಾರು ಕೆಡಿಪಿ ಸಭೆಯಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ, ಹಾಸ್ಟೆಲ್ ಗಳಲ್ಲಿ ಸೌಲಭ್ಯ ಕೊರತೆ ಸೇರಿದಂತೆ ಶಿಕ್ಷಣ, ಆರೋಗ್ಯ, ಮೂಲಸೌರ‍್ಯ, ಕುಡಿಯುವ ನೀರು ಪೂರೈಕೆ ಸೇರಿದಂತೆ ಸಾಕಷ್ಟು ಸಮಸ್ಯೆಗಳು ಬೆಳಕಿಗೆ ಬಂದಿವೆ. ಒಂದೊಂದು ತಾಲೂಕಿನಲ್ಲಿ ಭಿನ್ನವಾದ ಜಲ್ವಂತ ಸಮಸ್ಯೆಗಳು ಕಂಡು ಬಂದಿವೆ. ಭವಿಷ್ಯದಲ್ಲಿ ವಿಜಯನಗರವನ್ನು ಮಾದರಿ ಜಿಲ್ಲೆಯಾಗಿ ರೂಪಿಸಲು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ಯೋಗ ಸೃಷ್ಠಿ, ಪ್ರವಾಸೋದ್ಯಮ ಅಭಿವೃದ್ಧಿ ಹೀಗೆ ಎಲ್ಲ ವಲಯಗಳಲ್ಲಿ ಅಭಿವೃದ್ಧಿಯಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ದ ಪಡಿಸಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ವಿಜಯನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಎಚ್.ಆರ್.ಗವಿಯಪ್ಪ, ಕೂಡ್ಲಿಗಿ ಶಾಸಕ ಡಾ..ಎನ್.ಟಿ.ಶ್ರೀನಿವಾಸ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next