ಶಹಾಬಾದ: ನಗರದ ರಾಮಘಡ ಆಶ್ರಯ ಕಾಲೋನಿಯ ಸುಮಾರು 267 ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲು ತಾಂತ್ರಿಕ ದೋಷ ಎದುರಾಗುತ್ತಿದ್ದು, ಅದನ್ನು ಸರಿಪಡಿಸಿ ಹಕ್ಕು ಪತ್ರ ನೀಡಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ಎಸ್‌ಯುಸಿಐ (ಸಿ) ಸ್ಥಳೀಯ ಸಮಿತಿ ನಿಯೋಗದ ವತಿಯಿಂದ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.
ನಗರದ ರಾಮಘಡ ಆಶ್ರಯ ಕಾಲೋನಿಯ ಸುಮಾರು 267 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಬೇಕೆಂದು ಜಿಲ್ಲಾಧಿಕಾರಿಗಳಿಂದ ಅನುಮೋದನೆ ದೊರಕಿದೆ. ಆದರೂ ಸುಮಾರು ಎಂಟು ತಿಂಗಳಿನಿಂದ ಇಲ್ಲಿಯ ವರೆಗೆ ಹಕ್ಕು ಪತ್ರ ನೀಡದೇ ಇರುವುದರಿಂದ ತೊಂದರೆಗೆ ಸಿಲುಕಿದ್ದಾರೆ. ಇಲ್ಲಿನ ಜನರು ಹಲವು ವರ್ಷಗಳಿಂದ ಕಚೇರಿಗಳಿಗೆ ಅಲೆದಾಡಿದರೂ ಸಮಸ್ಯೆ ಮಾತ್ರ ಬಗೆಹರಿದಿಲ್ಲ. ಈ ಸಮಸ್ಯೆ ಕೂಡಲೇ ಬಗೆಹರಿಸಬೇಕೆಂದು ಮನವಿ ಸಲ್ಲಿಸಿದರು.
ಎಸ್‌ಯುಸಿಐ (ಸಿ) ಸ್ಥಳೀಯ ಸದಸ್ಯ ರಾಘವೇಂದ್ರ ಎಂ.ಜಿ. ನೇತೃತ್ವದ ನಿಯೋಗದಲ್ಲಿ ಆಶ್ರಯ ಕಾಲೋನಿ ನಿವಾಸಿಗಳಾದ ಗಿರೇಪ್ಪ, ರಮೇಶ ಗೌಡ, ವಿಜಯಕುಮಾರ ಇತರರು ಇದ್ದರು.