Advertisement

Nagara Panchami ಸಾರ್ವತ್ರಿಕ ರಜೆ ಘೋಷಿಸುವಂತೆ ಆಗ್ರಹ

12:05 AM Aug 20, 2023 | Team Udayavani |

ಮಂಗಳೂರು/ಕಾಪು: ತುಳುನಾಡಿನಲ್ಲಿ ವಿಶಿಷ್ಟವಾಗಿ ಆಚರಿಸ ಲಾಗುವ ನಾಗರ ಪಂಚಮಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡ ಬೇಕೆಂದು ಜೈ ತುಳುನಾಡ್‌ ಸಂಘಟನೆ ವತಿಯಿಂದ ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

Advertisement

ತುಳುನಾಡು “ದೈವಸೃಷ್ಟಿ ನಾಗದೃಷ್ಟಿ’ ಎಂಬ ಪ್ರತೀತಿ ಹೊಂದಿದೆ. ಇಲ್ಲಿ ದೈವಾರಾಧನೆಯಂತೆ ನಾಗರಾಧನೆಯೂ ತುಂಬಾ ಪ್ರಾಮುಖ್ಯ ಪಡೆದಿದೆ. ಕುಟುಂಬದ ಹಿರಿಯರು-ಕಿರಿಯರು ಸೇರಿ ಮೂಲಸ್ಥಳಕ್ಕೆ ಹೋಗಿ ನಾಗರಪಂಚಮಿ ಆಚರಿಸುವುದು ತುಳುನಾಡಿನ ವೈಶಿಷ್ಟ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ ಮತ್ತು ಶಾಲೆ-ಕಾಲೇಜು, ಕಚೇರಿಗಳಿಗೆ ರಜೆ ಇಲ್ಲದ ಕಾರಣ ಯುವಪೀಳಿಗೆ ಈ ಎಲ್ಲವುಗಳಿಂದ ದೂರ ಉಳಿದು, ತಮ್ಮ ಮೂಲ ಸಂಪ್ರದಾಯವನ್ನು ಮರೆಯುತ್ತಿದ್ದಾರೆ. ಆದ್ದರಿಂದ ನಾಗರಪಂಚಮಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಸಂಘಟನೆ ಮನವಿಯಲ್ಲಿ ಆಗ್ರಹಿಸಿದೆ.

ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಅವ‌ರಿಗೂ ಮನವಿ ನೀಡಲಾಯಿತು. ಮನವಿ ಸ್ವೀಕರಿಸಿದ ಶಾಸಕರು ಈ ಬಗ್ಗೆ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬುಶೇಖರ್‌, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮತ್ತು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರಿಗೆ ತುಳು ಲಿಪಿಯಲ್ಲಿ ಬರೆದ ನಾಮಫಲಕ ನೀಡಲಾಯಿತು.

ಜೈತುಳುನಾಡು ಸಂಘಟನೆಯ ಅಧ್ಯಕ್ಷ ವಿಶು ಶ್ರೀಕೇರ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next