Advertisement

Constitution ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬೊಮ್ಮಾಯಿ

08:33 PM Feb 29, 2024 | Team Udayavani |

ಬೆಂಗಳೂರು: ಪಾಕಿಸ್ಥಾನ ಪರ ಹೇಳಿಕೆ ನೀಡಿರುವುದರ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ‌ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಮಂಡಿಸಿರುವ ಬಜೆಟ್ ಸತ್ಯಕ್ಕೆ ದೋರವಾಗಿದೆ. ಈಗ ಪಾಕಿಸ್ಥಾನ‌ ಪರ ಘೋಷಣೆ ಕೂಗಿದವರ ರಕ್ಷಣೆ ಮಾತನಾಡುತ್ತ ನೈತಿಕವಾಗಿ ದಿವಾಳಿಯಾಗಿದ್ದಾರೆ. ಇವರು ಪ್ರಜಾಪ್ರಭುತ್ವ ಕ್ಕೆ ದಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ‌ ಎಂದು ಕಿಡಿ ಕಾರಿದರು.

ವಿಧಾನ ಸೌಧದಲ್ಲಿಯೇ ಪಾಕಿಸ್ಥಾನದ ಪರ ಘೋಷಣೆ ಕೂಗಿದ್ದು, ದೇಶದ ರಕ್ಷಣೆಗೆ ಇದು ಆಪತ್ತು ಉಂಟು ಮಾಡಿದೆ. ಅಧಿವೇಶವನ ಮುಗಿದ ತಕ್ಷಣ ಇದೆಲ್ಲ ಮರೆತು ಹೋಗುತ್ತಾರೆ ಎಂದು ಕಾಂಗ್ರೆಸ್ ನವರು ಅಂದುಕೊಂಡಿದ್ದಾರೆ. ಆದರೆ, ಇದನ್ನು ರಾಜ್ಯದ ಜನರು ಮರೆಯುವುದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.

ಪಾಕ್ ಪರವಾಗಿ ಸರ್ಕಾರ ನಿಲ್ಲುತ್ತದೆ ಅಂದರೆ, ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ. ಈ ಸರ್ಕಾರ ಎಷ್ಟು ಬೇಗ ತೊಲಗುತ್ತದೆ ರಾಜ್ಯಕ್ಕೆ ಅಷ್ಟು ಒಳ್ಳೆಯದಾಗುತ್ತದೆ. ಪಾಕಿಸ್ಥಾನದ ಪರ ಘೊಷಣೆ ಕೂಗಿರುವುದು ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ತೋರಿಸಲಾಗಿದೆ. ಇವರು ಎಫ್ ಎಸ್ ಎಲ್ ವರದಿ ಕತೆ ಏಕೆ ಹೇಳುತ್ತಿದ್ದಾರೆ. ಈ ಪ್ರಕರಣ ಮುಚ್ಚಿ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಘಟನೆ ನಡೆದು 48 ಗಂಟೆ ಕಳೆದರೂ ಯಾರನ್ನೂ ಬಂಧಿಸಿಲ್ಲ. ಬೇರೆ ಘಟನೆ ನಡೆದಾಗ ಎಫ್ ಎಸ್ ಎಲ್ ವರದಿಗಾಗಿ ಕಾಯದೇ ಮೊದಲು ಬಂಧಿಸುತ್ತಿದ್ದರು. ಇದರಲ್ಲಿ ಏನೂ ಇಲ್ಲ ಅಂದರೆ ಪೊಲಿಸರು ಏಕೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. ರಾಜ್ಯದ ಜನರು ಪಾಕಿಸ್ಥಾನ ಪರವಾದವನ್ನು ಆಯ್ಕೆ ಮಾಡಿಲ್ಲ. ಇದು ಕನ್ನಡಿಗರ ಹಾಗೂ ಭಾರತೀಯರ ಹಾಗೂ ಸಂವಿಧಾನ ವಿರೋಧಿ ಸರ್ಕಾರ ಈ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ”ಹರಿಪ್ರಸಾದ್ ಹೇಳಿಕೆ ಕಾಂಗ್ರೆಸ್‌ನವರ ಆಂತರಿಕ ಮನಸ್ಥಿತಿ ಏನಿದೆ ಎನ್ನುವುದನ್ನು ತೋರಿಸುತ್ತದೆ. ಪಾಕಿಸ್ಥಾನದ ಭಯೋತ್ಪಾದಕರು ಪ್ರತಿದಿನ ನಮ್ಮ ಸೈನಿಕರನ್ನು ಕೊಲ್ಲುತ್ತಾರೆ. ಅವರನ್ನು ನಮ್ಮ ಸ್ನೇಹಿತರು ಎಂದು ಹೇಳಿಕೊಳ್ಳಲಾಗುತ್ತದೆಯೇ, ಇವರ ಹೇಳಿಕೆಯನ್ನು ನೋಡಿದರೆ, ದೇಶದ್ರೋಹಿಗಳು ಎಂದು ಕರೆಯಬೇಕಾಗುತ್ತದೆ ಎಂದರು.

Advertisement

ಮನವಿ ಸಲ್ಲಿಸುವ ವೇಳೆ  ಉಭಯ ಸದನಗಳ ಸದಸ್ಯರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next