Advertisement

ಚಿಕ್ಕಮಗಳೂರಿನಿಂದ ಸ್ಪರ್ಧೆಗೆ ಸಿದ್ದರಾಮಯ್ಯಗೆ ಮನವಿ

09:11 AM Aug 04, 2022 | Team Udayavani |

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಕಿಸಾನ್ ಘಟಕ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

Advertisement

ಈ ಸಂಬಂಧ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಘಟಕದ ಅಧ್ಯಕ್ಷ ಸಚಿನ್ ಮೀಗಾ ತಮಗೆ ಶುಭಾಶಯಗಳನ್ನು ಕೋರುವುದರ ಜೊತೆಗೆ ನಿಮ್ಮ ಜನಮದಿನದ ಸಂದರ್ಭದಲ್ಲಿ ತಾವು 2023ರ ವಿಧಾನಸಭೆ ಚುನಾವಣೆಗೆ  ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕೋರಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರ ವರ್ತನೆಯಿಂದ ಬೇಸತ್ತಿದ್ದಾರೆ. ನಿಮ್ಮಂತಹ ಜನನಾಯಕರು ದಿವಂಗತ ಇಂದಿರಾ ಗಾಂಧಿ ಅವರಿಗೆ ಪುನರ್ಜನ್ಮ ನೀಡಿದ ಕ್ಷೇತ್ರದಿಂದ ಸ್ಪರ್ಧಿಸಿ, ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಮ್ಮ ಗೆಲುವಿನಿಂದ ಪುನರ್ಜನ್ಮವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ತಮ್ಮ ಜನಮದಿನದ ಸಂಧರ್ಭದ ಈ ವೇದಿಕೆಯಲ್ಲಿ ಈ ಮನವಿಯನ್ನು ಪುರಸ್ಕರಿಸುವಂತೆ ಕೋರಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಈ‌ ಮೂಲಕ ಮೀಗಾ ಟಕ್ಕರ್ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next