Advertisement

ಮೊಕದ್ದಮೆ ಹಿಂಪಡೆಯಲು ಮುಖ್ಯಮಂತ್ರಿಗೆ ಮನವಿ

11:03 PM Jul 31, 2019 | Team Udayavani |

ಮಡಿಕೇರಿ: ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ರದ್ದುಪಡಿಸಿರುವ ಬೆನ್ನಲ್ಲೇ ಟಿಪ್ಪು ಜಯಂತಿ ಆಚರಣೆ ಸಂದರ್ಭ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಕೊಡಗು ಜಿಲ್ಲೆಯ ಬಿಜೆಪಿ ಪ್ರಮುಖರು ಸಿಎಂ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

Advertisement

ಶಾಸಕ ಕೆ.ಜಿ ಬೋಪಯ್ಯ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ಪ್ರಮುಖರು, 2014ರಿಂದ 2108ರ ವರೆಗೆ ಟಿಪ್ಪು ಜಯಂತಿ ಆಚರಣೆ ಮತ್ತು ಇನ್ನಿತರ ಸಂದರ್ಭಗಳಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಲವಾರು ಪ್ರತಿಭಟನೆಗಳು ನಡೆದಿವೆ. ಆ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿ ಅಮಾಯಕರನ್ನೇ ಗುರಿಯಾಗಿಟ್ಟುಕೊಂಡು ಮೊಕದ್ದಮೆಗಳನ್ನು ಹೂಡಲಾಗಿದೆ ಎಂದು ಗಮನ ಸೆಳೆದರು. ಈ ಸಂಬಂಧ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಗಳಿಂದ ಎಲ್ಲ ಪ್ರಕರಣಗಳ ಮಾಹಿತಿ ತರಿಸಿಕೊಂಡು ಮೊಕದ್ದಮೆಗಳನ್ನು ಹಿಂಪಡೆಯಲು ಅನುಕೂಲವಾಗುವಂತೆ ಸಚಿವ ಸಂಪುಟದ ಮುಂದೆ ಮಂಡಿಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next