Advertisement

ಈಶ್ವರಪ್ಪರನ್ನು ಮುಖ್ಯಮಂತ್ರಿ ಮಾಡಲು ಹೈಕಮಾಂಡ್‍ಗೆ ಮನವಿ

06:39 PM Jul 23, 2021 | Team Udayavani |

ಬೆಂಗಳೂರು:  ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಅವರನ್ನು ಬದಲಾವಣೆ ಮಾಡಿದರೆ ಕುರುಬ ಜನಾಂಗದ ಹಿರಿಯರು, ಬಿಜೆಪಿ ನಾಯಕರಾದ ಕೆ.ಎಸ್  ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕೆಂದು ಹಿಂದುಳಿದ ವರ್ಗಗಳ ಮುಖಂಡರು ಬಿಜೆಪಿ ಹೈಕಮಾಂಡ್‍ಗೆ ಮನವಿ ಮಾಡಿದ್ದಾರೆ.

Advertisement

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನಮ್ಮ ಬೆಂಬಲವಿದೆ.  ವಯೋಮಿತಿ ಕಾರಣ ನೀಡಿ ಅವರನ್ನು ಬದಲಾಯಿಸುವುದಾದರೆ ಅವರ ಸಮಕಾಲೀನರಾದ ಹಾಗೂ ಹಿಂದುಳಿದ ವರ್ಗಗಳ ಮುಖಂಡರಾದ ಕೆ.ಎಸ್. ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಹಿಂದ ಮುಖಂಡ ಕೆ. ಮುಕುಡಪ್ಪ ಒತ್ತಾಯಿಸಿದ್ದಾರೆ.

2018 ರಿಂದ 2013 ರವರೆಗೆ ಬಿಜೆಪಿ ಅಧಿಕಾರವಿದ್ದ ಸಂದರ್ಭದಲ್ಲಿ ಒಕ್ಕಲಿಗ ಜನಾಂಗಕ್ಕೆ  ಸೇರಿದ ಸದಾನಂದಗೌಡ ಹಾಗೂ ಲಿಂಗಾಯಿತ ಸಮುದಾಯಕ್ಕೆ ಸೇರಿದ ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಿತ್ತು.  ರಾಜ್ಯದ 31 ಜಿಲ್ಲೆಗಳಲ್ಲಿ ಕುರುಬ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇದೆ.  ಇದನ್ನು ಗಮನಿಸಿ ಹೈಕಮಾಂಡ್ ಸಮುದಾಯದ ಮುಖಂಡರಾದ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕೆಂದು ಎಂದು ತಿಳಿಸಿದರು.

ಕೋಲಿ ಸಮಾಜದ ಮುಖಂಡರಾದ ತಿಪ್ಪಾರೆಡ್ಡಿ, ಸವಿತ ಸಮಾಜದ ಎಂ.ಬಿ. ಶಿವಪ್ಪ, ಮಾಲಿ ಸಮಾಜದ ಬಸವರಾಜ ಬಾಳೇಕಾಯಿ, ಯಾದವ ಸಮಾಜದ ಪ್ರಸನ್ನಕುಮಾರ್, ವಿಶ್ವ ಕರ್ಮ ಸಮುದಾಯದ ವಿಶ್ವನಾಥ್ ವಿಶ್ವಕರ್ಮ, ಈಡಿಗ ಸಮಾಜದ ಬಸವರಾಜ ಓಟೂರು, ಹುಚ್ಚಪ್ಪ ಮರಸ ಸೇರಿದಂತೆ ವಿವಿಧ ಮುಖಂಡರು ಮಾತನಾಡಿ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು.  ಬಿಜೆಪಿಯಲ್ಲಿ ಅತ್ಯಂತ ಹಿರಿಯರು ಮತ್ತು ಪಕ್ಷ ನಿಷ್ಠರಾಗಿದ್ದಾರೆ.  ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಬಿಜೆಪಿಯಲ್ಲಿ ಸೇವೆ ಸಲ್ಲಿಸಿದ್ದಾರೆ.  ಬಿಜೆಪಿ ಯುವ ಘಟಕದಿಂದ ಆರಂಭಿಸಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಬಿಜೆಪಿ ರಾಜ್ಯಾಧ್ಯಕ್ಷ, ಉಪ ಮುಖ್ಯಮಂತ್ರಿ, ಸಚಿವರಾಗಿ ಸೇವೆ ಸಲ್ಲಿಸಿರುವ ಇವರನ್ನು ಮುಖ್ಯಮಂತ್ರಿಯಾಗಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next