Advertisement

ಬೆಳಗಾವಿ ಎಪಿಎಂಸಿಗೆ ಅನುದಾನಕ್ಕಾಗಿ ಸಚಿವರಿಗೆ ಮನವಿ

07:26 PM Sep 23, 2020 | Team Udayavani |

ಬೆಳಗಾವಿ: ಬೆಳಗಾವಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ 15 ಕೋಟಿ ರೂ.‌ಅನುದಾನ ನೀಡಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ನೇತೃತ್ವದಲ್ಲಿ ಸಹಕಾರ ಸಚಿವ ಟಿ.‌ ಸೋಮಶೇಖರ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಬೆಳಗಾವಿ ಎಪಿಎಂಸಿ ಮಾರುಕಟ್ಟೆಯ ಆಡಳಿತ ಮಂಡಳಿಯ ನಿಯೋಗ ಸಚಿವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು. ಬೆಳಗಾವಿ ಎಪಿಎಂಸಿಯ ಬಾಕಿ ಉಳಿದಿರುವ ಆರ್ ಡಿ ಪಿ ಯೋಜನೆಯ 15 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ 15 ಕೋಟಿ ರೂ. ಅನುದಾನ ನೀಡಬೇಕೆಂದು ಒತ್ತಾಯಿಸಿತು.

ಬೆಳಗಾವಿ ಎಪಿಎಂಸಿ ಆವರಣದಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ ಅಂಗಡಿಕಾರರು ಒಂದು ಕೋಟಿ ರೂ. ವರೆಗೆ ಮಳಿಗೆಗಳನ್ನು ಖರೀದಿ ಮಾಡಿದ್ದಾರೆ. ಕೋವೀಡ್ ಹಿನ್ನೆಲೆಯಲ್ಲಿ ಅವರಿಗೆ ಕಂತು ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಐದು ವರ್ಷಗಳವರೆಗೆ ಕಂತು ತುಂಬುವ ಅವಧಿ ನೀಡುವಂತೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿತು.

ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಲಕ್ಷ್ಮೀ ಹೆಬ್ಬಾಳಕರ, ಸದಸ್ಯ ಸುಧೀರ ಗಡ್ಡೆ , ತಾಪಂ ಸದಸ್ಯ ನಿಲೇಶ ಚಂದಗಡಕರ, ಕಾಂಗ್ರೆಸ್ ಯುವ ಮುಖಂಡ ತೌಸೀಫ್ ಫಣಿಬಂಧ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next