Advertisement

ಎನ್‌ಜಿಟಿ ವಿರುದ್ಧ ‌ ಸುಪ್ರೀಂಗೆ ಮೇಲ್ಮನವಿ

06:00 AM Dec 14, 2018 | |

ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಜಾರಿ ಮಾಡಿರುವ ಮಾರ್ಗದರ್ಶಿ ಸೂತ್ರಗಳ
ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬೆಳಗಾವಿಯಲ್ಲಿ ಈ ಬಗ್ಗೆ ಗುರುವಾರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಅಡ್ವೋಕೇಟ್‌ ಜನರಲ್‌ ಹಾಗೂ ಕಾನೂನು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಭಾಗವಹಿಸಿದ್ದ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಎ.ಎಸ್‌. ಪೊನ್ನಣ್ಣ, ರಾಜ್ಯ ಸರ್ಕಾರಕ್ಕೆ ಮೂರು ಸಾಧ್ಯತೆಗಳ ಬಗ್ಗೆ ವಿವರಣೆ ನೀಡಿದ್ದು, ಈ ಪೈಕಿ ಪ್ರತ್ಯೇಕ ವಿಧೇಯಕ ಜಾರಿ ಮಾಡಿ ಎನ್‌ಜಿಟಿ ಚಾಟಿಯಿಂದ ತಪ್ಪಿಸಿಕೊಳ್ಳುವುದು ಅಥವಾ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶ ಇದೆ ಎಂದು ಹೇಳಿದ್ದಾರೆ. ಅಲ್ಲದೆ ಹಸಿರು ಪೀಠದಲ್ಲಿಯೇ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಬೆಳ್ಳಂದೂರು ಕೆರೆ ವಿಷಯದಲ್ಲಿ ನ್ಯಾಯ ಮಂಡಳಿಯಲ್ಲಿ ಠೇವಣಿ ಇಡಬೇಕೆಂದು ಎನ್‌ಜಿಟಿ ಆದೇಶಿಸಿರುವ ಬಗ್ಗೆ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ. 75 ಮೀಟರ್‌ವರೆಗೆ ಬಫ‌ರ್‌ ಝೊನ್‌ ಪ್ರದೇಶ ಮೀಸಲಿಡುವಂತೆ ಕರ್ನಾಟಕಕ್ಕೆ ಮಾತ್ರ ಆದೇಶ ಮಾಡಿರುವ ಬಗ್ಗೆಯೂ ರಾಜ್ಯ ಸರ್ಕಾರ ಅಸಮಾಧಾನ ಹೊಂದಿದೆ ಎಂದು ತಿಳಿದು ಬಂದಿದ್ದು, ನ್ಯಾಯಮಂಡಳಿ ಆದೇಶ
ಪಾಲಿಸಿದರೆ ಅರ್ಧ ಬೆಂಗಳೂರು ನಾಶಪಡಿಸಬೇಕಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಬಫ‌ರ್‌ ಝೊನ್‌ ಬಿಡುವ ವಿಚಾರದಲ್ಲಿ ಎನ್‌ಜಿಟಿ ದೇಶದ ಎಲ್ಲ ರಾಜ್ಯಗಳಿಗೂ ಏಕ ರೂಪದ ನಿಯಮ ರೂಪಿಸಬೇಕು ಎಂದು
ಮೇಲ್ಮನವಿ ಸಂದರ್ಭದಲ್ಲಿ ಪ್ರಶ್ನಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸೋಮವಾರದ ಒಳಗೆ ಸ್ಪಷ್ಟ ಅಭಿಪ್ರಾಯ ನೀಡುವಂತೆ ಅಡ್ವೋಕೇಟ್‌ ಜನರಲ್‌ ಹಾಗೂ ಕಾನೂನು ಇಲಾಖೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು
ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next