Advertisement

ಚಲಿಸುತ್ತಿದ್ದ ಕಾರಿನ ಮೇಲೆ ಪಲ್ಟಿಯಾದ ಟ್ರಕ್ : ಮೂವರು ಸ್ಥಳದಲ್ಲೇ ಸಾವು

12:03 PM Oct 01, 2022 | Team Udayavani |

ಶಿಮ್ಲಾ : ಚಲಿಸುತ್ತಿದ್ದ ಕಾರಿನ ಮೇಲೆ ಟ್ರಕ್ ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿಮ್ಲಾದ ಚರಬ್ರಾ ಬಳಿಯ ರಾಷ್ಟ್ರೀಯ ಹೆದ್ದಾರಿ-05 ರಲ್ಲಿ ಸಂಭವಿಸಿದೆ.

Advertisement

ಮೃತರನ್ನು ಶಿಮ್ಲಾದ ಚೋಪಾಲ್ ತೆಹ್ಸಿಲ್‌ನ ಅರ್ರಾ ಗ್ರಾಮದ ನಿವಾಸಿ ಸೂರತ್ ಸಿಂಗ್ (45), ಚೋಪಾಲ್ ತೆಹ್ಸಿಲ್‌ನ ಹಿರಾ ಗ್ರಾಮದ ನಿವಾಸಿ ಪ್ರತಾಪ್ ಸಿಂಗ್ (71) ಮತ್ತು ಶಿಮ್ಲಾದ ಚೋಪಾಲ್‌ನ ಪೋಶ್ಡಾ ಗ್ರಾಮದ ನಿವಾಸಿ ಕೃಪಾ ರಾಮ್ (63) ಎಂದು ಗುರುತಿಸಲಾಗಿದೆ.

ಶನಿವಾರ ಬೆಳಗ್ಗೆ 6:30ರ ಸುಮಾರಿಗೆ ಶಿಮ್ಲಾ ಕಣಿವೆ ಬಳಿ ಈ ಅವಘಡ ಸಂಭವಿಸಿದ್ದು, ಸೇಬು ಹಣ್ಣು ಹೇರಿಕೊಂಡು ಬರುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಪೊಲೀಸರು ಕ್ರೇನ್ ಸಹಾಯದಿಂದ ಸಂತ್ರಸ್ತರನ್ನು ರಕ್ಷಿಸಿದರು, ಆದರೆ ಆ ವೇಳೆಗೆ ಮೂವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಟ್ರಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪೊಲೀಸರು ಟ್ರಕ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಅಂತ್ಯಸಂಸ್ಕಾರಕ್ಕಾಗಿ ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : 5ಜಿ ಸೇವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ; ಅಗ್ಗದ ದರದಲ್ಲಿ ಇಂಟರ್ನೆಟ್ ಎಂದ ಜಿಯೋ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next