Advertisement

2ನೇ ವರ್ಷದ ಡಿಪ್ಲೊಮಾಗೆ ಅರ್ಜಿ ಆಹ್ವಾನ

11:07 PM Jun 17, 2019 | Lakshmi GovindaRaj |

ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ಅಥವಾ ತಾಂತ್ರಿಕ ಕೋರ್ಸ್‌ ಪಡೆದಿರುವ ವಿದ್ಯಾರ್ಥಿಗಳು ನೇರವಾಗಿ 2ನೇ ವರ್ಷದ ಡಿಪ್ಲೊಮಾ ಕೋರ್ಸ್‌ಗೆ ಸೇರಿಕೊಳ್ಳಲು ಜೂ.29ರೊಳಗೆ ಅರ್ಜಿ ಸಲ್ಲಿಸಬೇಕು.

Advertisement

ಜುಲೈ 5ರಂದು ಮೊದಲ ಹಂತದ ಆನ್‌ಲೈನ್‌ ಇಂಟರಾಕ್ಟೀವ್‌ ಕೌನ್ಸೆಲಿಂಗ್‌ ನಡೆಯಲಿದೆ. ಆನ್‌ಲೈನ್‌ ಕೌನ್ಸೆಲಿಂಗ್‌ ವೇಳೆಯಲ್ಲೇ ತಮಗೆ ಬೇಕಾದ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ವಿವಿಧ ಡಿಪ್ಲೊಮಾ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಅರ್ಹ ವಿದ್ಯಾರ್ಥಿಗಳು ಮಾಹಿತಿಗಾಗಿ www.det.kar.nic.in ಗೆ ಸಂಪರ್ಕಿಸಬಹುದು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next