ಸಾಗರ: ನಗರದ ಇಂದಿರಾಗಾಂಧಿ ಪ್ರಥಮ ದರ್ಜೆ ಮಹಿಳಾ ಕಾಲೇಜು 2021-22 ರ ಶೈಕ್ಷಣಿಕ ವರ್ಷಕ್ಕೆ ವಿವಿಧ ವಿಷಯಗಳ ಸ್ನಾತಕ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಉಳಿಕೆ ಬೋಧನಾ ಕಾರ್ಯಭಾರಕ್ಕೆ ಕಾಲೇಜಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಮನವಿ ಪತ್ರದೊಂದಿಗೆ ತಮ್ಮ ವೈಯಕ್ತಿಕ ವಿವರಗಳ ಮೂಲಕ ಸಂಬಂಧಿತ ದೃಢೀಕೃತ ನಕಲು ಪ್ರತಿಗಳನ್ನು ಲಗತ್ತಿಸಿ ನ. 6ರೊಳಗೆ ಕಾಲೇಜು ಕಛೇರಿಗೆ ತಲುಪಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2021-22 ನೇ ಶೈಕ್ಷಣಿಕ ವರ್ಷದಲ್ಲಿ ಸೇವೆ ಸಲ್ಲಿಸಿದವರಿಗೆ ಮೊದಲ ಆದ್ಯತೆ. 2021-22 ನೆಯ ಸಾಲಿನಲ್ಲಿ ಅತಿಥಿ ಉಪನ್ಯಾಸಕರ 101ರ ಸಂಖ್ಯೆಗಿಂತ ಹೆಚ್ಚುವರಿ ಅತಿಥಿ ಉಪನ್ಯಾಸಕರು ಅಗತ್ಯವಿದ್ದಲ್ಲಿ ಕಾಲೇಜಿನಲ್ಲಿ ಈ ಹಿಂದಿನ ವರ್ಷಗಳಲ್ಲಿ ಕರ್ತವ್ಯ ನಿರ್ವಹಿಸಿದವರನ್ನು ಕೂಡ ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುವುದು.
ಇದನ್ನೂ ಓದಿ: ಗೋವಾವವನ್ನು ಕಲ್ಲಿದ್ದಲು ಗಣಿಗಾರಿಕೆ ಕೇಂದ್ರವನ್ನಾಗಿಸಲು ಬಿಡಲ್ಲ: ರಾಹುಲ್ ಗಾಂಧಿ
ಈ ಹಿಂದೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು ಲಭ್ಯವಿಲ್ಲದಿದ್ದಲ್ಲಿ ಇತರ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಪರಿಗಣಿಸಲಾಗುವುದು. ಅರ್ಜಿಗಳನ್ನು ಮುದ್ದಾಂ ಅಥವಾ ಅಂಚೆಯ ಮೂಲಕ ಕಛೇರಿ ವೇಳೆಯಲ್ಲಿ ತಲುಪಿಸಬೇಕು. ದೃಢೀಕೃತ ಅಗತ್ಯ ದಾಖಲೆಗಳ ನಕಲು ಪ್ರತಿ ಇಲ್ಲದಿದ್ದಲ್ಲಿ ಮತ್ತು ಅರ್ಪೂಣವಾದ ವಿವರಗಳಿದ್ದಲ್ಲಿ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಾಲೇಜಿನ ಪ್ರಾಚಾರ್ಯರು ಸ್ಪಷ್ಟಪಡಿಸಿದ್ದಾರೆ.