Advertisement

ನ್ಯಾಯಮೂರ್ತಿಗಳ ಹುದ್ದೆ ಭರ್ತಿ ಅರ್ಜಿ ವರ್ಗಾವಣೆ

12:43 PM Nov 03, 2017 | |

ಬೆಂಗಳೂರು: ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿಯಿರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸುವ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್‌ ನೇತೃತ್ವದ ವಿಭಾಗೀಯ ಪೀಠ ಮತ್ತೂಂದು ನ್ಯಾಯಪೀಠಕ್ಕೆ ವರ್ಗಾಯಿಸಿದೆ.

Advertisement

ಅರ್ಜಿಯಲ್ಲಿ ಹೈಕೋರ್ಟ್‌ ಅನ್ನು ಪ್ರತಿವಾದಿಯನ್ನಾಗಿ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ವಿಭಾಗೀಯ ಪೀಠದ ಬದಲು ಈ ಅರ್ಜಿಯ ವಿಚಾರಣೆ ಬೇರೊಂದು ಪೀಠ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ. ರಮೇಶ್‌, ಇನ್ನೊಂದು ಪೀಠದಲ್ಲಿ ಅರ್ಜಿ ವಿಚಾರಣೆ ನಿಗದಿಪಡಿಸಿ ಎಂದು ನ್ಯಾಯಾಲಯದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯ ಹೈಕೋರ್ಟ್‌ನಲ್ಲಿ 37 ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿಯಿವೆ. ಅವನ್ನು ಶೀಘ್ರ ಭರ್ತಿ ಮಾಡುವಂತೆ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ಎನ್‌. ವೇಣುಗೋಪಾಲಗೌಡ, ವಕೀಲರಾದ ಎಸ್‌.ಬಸವರಾಜು ಮತ್ತು ಬಿ.ಎಂ.ಅರುಣ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಗುರುವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next