Advertisement

ಹೂ ಬೆಳೆ ನಷ್ಟ ಪರಿಹಾರಕ್ಕಾಗಿ ಅರ್ಜಿ

05:42 AM May 20, 2020 | Suhan S |

ಕಲಬುರಗಿ: ಲಾಕ್‌ಡೌನ್‌ ಅವಧಿಯಲ್ಲಿ ಸಂಕಷ್ಟಕ್ಕೊಳಗಾದ ಜಿಲ್ಲೆಯ ಹೂ ಬೆಳೆಯುವ ರೈತರಿಗೆ ಗರಿಷ್ಟ 1 ಹೆಕ್ಟೇರ್‌ ವರೆಗೆ 25,000 ರೂ.ಗಳಂತೆ ಪರಿಹಾರ ಧನ ನೀಡಲಾಗುತ್ತಿದ್ದು, ಜಿಲ್ಲೆಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement

ಒಂದು ಹೆಕ್ಟೇರ್‌ಗಿಂತ ಕಡಿಮೆ ವಿಸ್ತೀರ್ಣದಲ್ಲಿನ ಹೂ ಬೆಳೆಗಾರರಿಗೆ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಹಾರಧನ ನೀಡಲಾಗುತ್ತದೆ. 2019-20ನೇ ಸಾಲಿನ ಬೆಳೆ ಸಮೀಕ್ಷೆಯಲ್ಲಿನ ಹೂ ಬೆಳೆಗಾರರ (ಬಹುವಾರ್ಷಿಕ ಹೂ ಬೆಳೆಗಳ ಮುಂಗಾರು ಬೆಳೆ ಸಮೀಕ್ಷೆ ಹಾಗೂ ವಾರ್ಷಿಕ ಹೂ ಬೆಳೆಗಳ ಹಿಂಗಾರು ಬೆಳೆ ಸಮೀಕ್ಷೆ) ದೃಢೀಕರಿಸಿದ ಪಟ್ಟಿಯನ್ನು ತಾಲೂಕು ಮಟ್ಟದ ತೋಟಗಾರಿಕೆ ಕಚೇರಿಗಳಲ್ಲಿ, ಗ್ರಾಪಂ ಹಾಗೂ ರೈತ ಸಂಪರ್ಕ ಕೇಂದ್ರಗಳ ನಾಮಫಲಕಗಳಲ್ಲಿ ಪ್ರದರ್ಶಿಸಲಾಗುವುದು.

ಈ ಸಮೀಕ್ಷೆ ಪಟ್ಟಿಯಲ್ಲಿ ಹೆಸರು ಇರುವ ರೈತರು ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಬೆಳೆ ಸಮೀಕ್ಷೆ ಪಟ್ಟಿಯಲ್ಲಿ ಹೆಸರು ಇಲ್ಲದಿರುವ ಇತರೆ ರೈತರು ಪ್ರಾಮಾಣಿಕವಾಗಿ ಹೂ ಬೆಳೆದಿದ್ದಲ್ಲಿ ಸಂಬಂಧಪಟ್ಟ ಆಯಾ ತಾಲೂಕಿನ ತೋಟಗಾರಿಕೆ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳಾದ ಪಹಣಿ ಆಧಾರ್‌ ಕಾರ್ಡ್‌, ರೈತರ ಬ್ಯಾಂಕ್‌ ಖಾತೆ ಪಾಸ್‌ಬುಕ್‌ ಪ್ರತಿ, ಬೆಳೆಯ ಸ್ವಯಂ ದೃಢೀಕರಣದೊಂದಿಗೆ ಮೇ 28ರೊಳಗಾಗಿ ಆಯಾ ತಾಲೂಕುಗಳ ತೋಟಗಾರಿಕೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬೇಕು.

ಮಾ.24ರ ನಂತರ ನಾಟಿ ಮಾಡಿರುವ ಹೂ ಬೆಳೆಗಾರರಿಗೆ ಈ ಯೋಜನೆಯಡಿ ಪರಿಹಾರಕ್ಕೆ ಪರಿಗಣಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ತಾಲೂಕುಗಳಲ್ಲಿನ ತೋಟಗಾರಿಕೆ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಲು ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next