Advertisement

ರೈಲ್ವೆ ಇಲಾಖೆ ಖಾಲಿ ಹುದ್ದೆ ನೇಮಕಕ್ಕೆ ಮನವಿ

02:05 PM Jul 24, 2022 | Team Udayavani |

ಶಹಾಬಾದ: ರೈಲ್ವೆ ಇಲಾಖೆಯಲ್ಲಿ 90,000 ಹುದ್ದೆಗಳನ್ನು ರದ್ದುಪಡಿಸುವ ನಿರ್ಧಾರವನ್ನು ತಕ್ಷಣವೇ ಹಿಂಪಡೆದು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿ ನಗರದ ಎಐಡಿವೈಒ ಸಂಘಟನೆ ವತಿಯಿಂದ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Advertisement

ಎಐಡಿವೈಒ ಜಿಲ್ಲಾ ಸಂಚಾಲಕ ಜಗನ್ನಾಥ ಎಸ್‌. ಎಚ್‌ ಮಾತನಾಡಿ,ದೇಶದೆಲ್ಲೆಡೆ ನಿರುದ್ಯೋಗ ಭೀಕರವಾಗಿ ಹೆಚ್ಚುತ್ತಿದೆ. ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆಯೂ ದೊಡ್ಡ ಪ್ರಮಾಣದಲ್ಲಿದೆ. ತಾಂತ್ರಿಕ ಶಿಕ್ಷಣ ಪಡೆದು ರೈಲ್ವೆ ಪರೀಕ್ಷೆ ತಯಾರಿ ನಡೆಸುತ್ತಿರುವ ವಿದ್ಯಾವಂತ ನಿರುದ್ಯೋಗಿ ಯುವಕರ ಪಾಲಿಗೆ ಕೇಂದ್ರ ಸರ್ಕಾರದ ಈ ನಿರ್ಧಾರ ಅತ್ಯಂತ ನೋವಿನ ಸಂಗತಿಯಾಗಿದೆ ಎಂದರು.

ಹಿಂದಿನ ವರ್ಷಗಳಲ್ಲಿಯೂ ಸರ್ಕಾರವು ರೈಲ್ವೆಯಲ್ಲಿ ನೌಕರರ ಸಂಖ್ಯೆ ಕಡಿತಗೊಳಿಸಿದೆ. ರೈಲ್ವೆ ಇಲಾಖೆ ಪ್ರತಿ ವರ್ಷ ಸರ್ಕಾರಕ್ಕೆ ಆದಾಯ ನೀಡುತ್ತಿದೆ. ಆದರೆ ಸರ್ಕಾರ ದೇಶಿ ಮತ್ತು ವಿದೇಶಿ ಕಂಪನಿಗಳಿಗೆ ಲಾಭ ಮಾಡಿಕೊಡಲು ರೈಲ್ವೆಯನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದಾಗಿ ಬಡವರಿಗೆ ರೈಲಿನಲ್ಲಿ ಪ್ರಯಾಣ ಮಾಡುವುದು ತುಂಬಾ ದುಬಾರಿಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈಲ್ವೆ ಇಲಾಖೆಯಲ್ಲಿನ ಹುದ್ದೆಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ತಕ್ಷಣವೇ ಹಿಂದಕ್ಕೆ ಪಡೆಯಬೇಕು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಕ್ಷಣ ನೇಮಕಾತಿ ಮಾಡಿ. ಖಾಸಗೀಕರಣ ಮಾಡುವುದನ್ನು ಸ್ಥಗಿತಗೊಳಿಸಿ ಎಂದು ಆಗ್ರಹಿಸಿ ರೈಲ್ವೆ ವ್ಯವಸ್ಥಾಪಕರ ಮುಖಾಂತರ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ನಿಯೋಗದಲ್ಲಿ ಸಿದ್ಧು ಚೌಧರಿ, ರಘು ಮಾನೆ, ಶ್ರೀನಿವಾಸ. ಡಿ, ಸಾಗರ, ಶಿವುಕುಮಾರ ಇ.ಕೆ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next