Advertisement

ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

06:51 AM May 01, 2019 | Lakshmi GovindaRaj |

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ 2019-20ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Advertisement

ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಶೇ.35ರಷ್ಟು ಅಂಕಗಳನ್ನು ಪಡೆದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.dte.kar.nic.in ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನವಾಗಿದೆ. ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ ಅಥವಾ ದೂ: 080-22356949ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next