Advertisement

PGCET ಗೆ ಅರ್ಜಿ ಸಲ್ಲಿಕೆ: ಇಂದು ಕೊನೆಯ ದಿನ

11:24 PM Aug 22, 2023 | Team Udayavani |

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂಟೆಕ್‌, ಎಂ ಅರ್ಕಿಟೆಕ್ಚರ್‌ ಕೋರ್ಸ್‌ಗಳ ಪ್ರವೇಶ ಕ್ಕಾಗಿ ಅರ್ಜಿ ಸಲ್ಲಿಸುವ ಅಂತಿಮ ಅವಕಾಶವನ್ನು ಆಗಸ್ಟ್‌ 23ರ ರಾತ್ರಿ 11.59ರವರೆಗೆ ವಿಸ್ತರಿಸಲಾಗಿದೆ. ಇಲ್ಲಿಯವರೆಗೆ ಪಿಜಿಸಿಇಟಿ-2023ಗೆ ನೋಂದಣಿ ಮಾಡಿಕೊಳ್ಳದೆ ಇರುವ ಅಭ್ಯರ್ಥಿಗಳು, ಆನ್‌ಲೈನ್‌ ಮೂಲಕ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಬಹುದು.

Advertisement

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಿದೆ. ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶವಾಗಿದ್ದು ಮತ್ತೆ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next