Advertisement

High Court ಪ್ರಜ್ವಲ್‌ ರೇವಣ್ಣ ಮಧ್ಯಾಂತರ ಅರ್ಜಿ ಸಲ್ಲಿಕೆ

11:17 PM Sep 04, 2023 | Team Udayavani |

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರ ದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧು ಗೊಳಿಸಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ತಡೆಯಾಜ್ಞೆ ನೀಡಬೇಕೆಂದು ಕೋರಿ ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ಗೆ ಮಧ್ಯಾಂತರ ಅರ್ಜಿ ಸಲ್ಲಿಸಿದ್ದಾರೆ.

Advertisement

ಪ್ರಜ್ವಲ್‌ ವಿರುದ್ಧ ನ್ಯಾ| ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೆ.1ರಂದು ಆದೇಶ ಹೊರಡಿಸಿತ್ತು. ಈ ಆದೇಶದ ಪ್ರತಿಯನ್ನು ಸಂಸತ್‌ ಸ್ಪೀಕರ್‌ಗೆ ಕಳುಹಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿತ್ತು.

ಮೇಲ್ಮನವಿ ಸಲ್ಲಿಸುವುದರ ಒಳಗೆ ಸಂಸತ್‌ ಸ್ಪೀಕರ್‌ ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದರೆ ಕಷ್ಟವಾ ದೀತು ಎಂದು ಮೇಲ್ಮನವಿ ಸಲ್ಲಿಸುವವರೆಗೆ ಸೆ.1ರ ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್‌ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

 

Advertisement

Udayavani is now on Telegram. Click here to join our channel and stay updated with the latest news.

Next