ಕೊರಟಗೆರೆ: ತಾಲೂಕು ಕನ್ನಡ ರಾಜ್ಯೋತ್ಸವದಲ್ಲಿ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಿ, ಆಯ್ಕೆ ಸಮಿತಿಗೆ ಅ.25ರ ಸಂಜೆಯೊಳಗಾಗಿ ತಾಲೂಕು ಕಚೇರಿ ರಾಜ್ಯೋತ್ಸವ ಸಮಿತಿಗೆ ಅರ್ಜಿ ಸಲ್ಲಿಸಬೇಕು ಎಂದು ತಹಶೀಲ್ದಾರ್ ನಾಹೀದಾ ಜಮ್‌ಜಮ್ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರ್ಕಾರಿ ಮಾರ್ಗ ಸೂಚಿಯಂತೆ ಸರಳವಾಗಿ ಆಚರಣೆಗೆ ಸಹಕರಿಸಬೇಕು. ರಾಜ್ಯೋತ್ಸವದಲ್ಲಿ 15 ಮಂದಿ ವಿವಿಧ ಕ್ಷೇತ್ರದ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಗುವುದು.
ಇದನ್ನೂ ಓದಿ:- ತಿಪಟೂರು: ಸಿಡಿಲು ಬಡಿದು ಕುರಿಗಾಹಿ ದುರ್ಮರಣ, ಇನ್ನೋರ್ವ ಗಂಭೀರ
ತಾಲೂಕಿನ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 5ನೇ ತರಗತಿ ವಿದ್ಯಾರ್ಥಿ ಗಳಿಗೆ ಕನ್ನಡ ಭಾಷೆಯಲ್ಲಿ ನಿರ್ಗಳವಾಗಿ ಮಾತ ನಾಡುವ ಸ್ಪರ್ಧೆ ನಡೆಸಿ ಪ್ರಶಸ್ತಿ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಸ್ಪರ್ಧೆ ನಡೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಗ್ರೇಡ್ 2 ತಹಶೀಲ್ದಾರ್ ನರಸಿಂಹಮೂರ್ತಿ, ಬೆಸ್ಕಾಂ ಎಇಇ ಮಲ್ಲಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ಲೋಕೋಪಯೋಗಿ ಇಲಾಖೆ ಎಇಇ ಉಮಾಮಹೇಶ್, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ್ ಕುಮಾರ್, ಡಾ.ಪುಪ್ಪಲತಾ, ಡಾ.ಸಿದ್ದನಗೌಡ, ತೋಟಗಾರಿಕಾ ಇಲಾಖೆಯ ನಿರ್ದೇಶಕಿ ಪುಪಲತಾ, ಸಿಡಿಪಿಒ ಅಂಬಿಕಾ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ನಟರಾಜು, ಸದಸ್ಯರಾದ ಕೆ.ಆರ್.ಓಬಳರಾಜು, ಪುಟ್ಟ ನರಸಪ್ಪ, ಮಾಜಿ ಸದಸ್ಯ ಕೆ.ವಿ,ಮಂಜುನಾಥ್, ಮುಕಂಡರಾದ ಮೈಲಾರಪ್ಪ, ಚಿಕ್ಕರಂಗಯ್ಯ, ಆಟೋ ಕುಮಾರ್, ಕೆ.ಎಂ.ಸುರೇಶ್ ಉಪಸ್ಥಿತರಿದ್ದರು.