Advertisement

ಇಂದು ಜೆಡಿಎಸ್‌ ರಾಜ್ಯಾಧ್ಯಕ್ಷರ ನೇಮಕ?

11:51 PM Jul 03, 2019 | Lakshmi GovindaRaj |

ಬೆಂಗಳೂರು: ಪಕ್ಷ ಸಂಘಟನೆಯತ್ತ ಚಿತ್ತ ಹರಿಸಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಎಚ್‌.ವಿಶ್ವನಾಥ್‌ ರಾಜೀನಾಮೆಯಿಂದ ತೆರವಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗುರುವಾರ ಹೊಸಬರ ನೇಮಕ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಸಕಲೇಶಪುರ ಶಾಸಕ ಹಾಗೂ ಮಾಜಿ ಸಚಿವ ಎಚ್‌.ಕೆ.ಕುಮಾರಸ್ವಾಮಿಯವರನ್ನು ರಾಜ್ಯಾಧ್ಯಕ್ಷರನ್ನಾಗಿ ಹಾಗೂ ಮಧು ಬಂಗಾರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗುವುದು. ಗುರುವಾರ ಈ ಕುರಿತು ದೇವೇಗೌಡರು ಅಧಿಕೃತ ಪ್ರಕಟಣೆ ಹೊರಡಿಸಲಿದ್ದಾರೆ. ಎಚ್‌.ಕೆ.ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪ ಅವರಿಗೆ ರಾಜ್ಯ ಘಟಕದ ಪದಾಧಿಕಾರಿಗಳ ನೇಮಕದ ಅಧಿಕಾರ ನೀಡಲಾಗುವುದು ಎಂದು ಹೇಳಲಾಗಿದೆ.

ನಿಖಿಲ್‌ಗೆ ಸ್ಥಾನ?: ಈ ಮಧ್ಯೆ, ಮಧು ಬಂಗಾರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದರೆ ಜೆಡಿಎಸ್‌ ಯುವ ಘಟಕಕ್ಕೆ ನಿಖಿಲ್‌ ಕುಮಾರಸ್ವಾಮಿ ನೇಮಕವಾಗಬಹುದು ಎನ್ನಲಾಗುತ್ತಿದೆ. ಪ್ರಸ್ತುತ ಮಧು ಬಂಗಾರಪ್ಪ ಅವರು ಜೆಡಿಎಸ್‌ ಯುವ ಘಟಕದ ಕಾರ್ಯಾಧ್ಯಕ್ಷರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next