ಬೆಂಗಳೂರು: ಪ್ರಾಥಮಿಕ ಶಾಲೆಯ ಅರ್ಹ ಪದವೀಧರ ಶಿಕ್ಷಕರಿಗೆ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಸೇವಾ ಜೇಷ್ಠತೆಯೊಂದಿಗೆ 6 ರಿಂದ 8ನೇ ತರಗತಿಗೆ ನಿಯುಕ್ತಿಗೊಳಿಸುವ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.
Advertisement
6 ರಿಂದ 8ನೇ ತರಗತಿಗಳಿಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಶೀಲಿಸುವಂತೆ ಸಚಿವರು ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬರೆದಿರುವ ಟಿಪ್ಪಣಿಯಲ್ಲಿ ಸೂಚನೆ ನೀಡಿದ್ದಾರೆ.