Advertisement

Appointment letter : ಶೀಘ್ರ 2020 ಹುದ್ದೆಗೆ ನೇಮಕಾತಿ ಪತ್ರ

09:03 PM Feb 29, 2024 | Team Udayavani |

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳ ಭರ್ತಿ ಪ್ರಕ್ರಿಯೆ ವಿವಿಧ ಹಂತಗಳಲ್ಲಿದ್ದು, ಶೀಘ್ರವೇ ಹುದ್ದೆಗಳ ನೇಮಕಾತಿ ಪತ್ರಗಳನ್ನು ಅಭ್ಯರ್ಥಿಗಳು ಪಡೆಯಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Advertisement

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಎಂಜಿನಿಯರ್‌, 288 ಸಹಾಯಕ ಎಂಜಿನಿಯರ್‌ ಮತ್ತು 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕೆಪಿಎಸ್‌ಸಿ ಕಳೆದ ಜನವರಿ 31ರಂದು ಅಂತಿಮಪಟ್ಟಿ ಅಧಿಸೂಚನೆ ಹೊರಡಿಸಿದೆ. ಈ ಪೈಕಿ 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ನೇಮಕಾತಿ ಆದೇಶವನ್ನು ಕರ್ನಾಟಕ ಲೋಕಸೇವಾ ಆಯೋಗವು ತಡೆ ಹಿಡಿದಿದ್ದು, ಉಳಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ, ಅದೇ ರೀತಿ ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next