Advertisement

ಅನುದಾನಿತ ಕಾಲೇಜುಗಳಿಗೆ 1250 ಬೋಧಕರ ನೇಮಕ

08:25 AM Aug 25, 2017 | Harsha Rao |

ಬೆಂಗಳೂರು: ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಮತ್ತು ಪ್ರಾಧ್ಯಾಪಕರ ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು. ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಮಾತನಾಡಿ, ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ನಿವೃತ್ತಿ ಹಾಗೂ ಇತರ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡದಿರುವುದರಿಂದ ಸುಮಾರು 1250 ಹುದ್ದೆಗಳು ಖಾಲಿ ಉಳಿದಿವೆ. ಆದಷ್ಟು ಶೀಘ್ರ ಭರ್ತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.

Advertisement

ಹುದ್ದೆಗಳನ್ನು ಕೆಪಿಎಸ್ಸಿ ಮೂಲಕ ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ರೋಸ್ಟರ್‌ ಪದಟಛಿತಿ ಅನುಸರಿಸಲಾಗುವುದು ಎಂದು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2100 ಪ್ರಾಧ್ಯಾಪಕರ ಹುದ್ದೆಗಳನ್ನು ನೇಮಿಸಲಾಗಿದ್ದು, ಸೆಪ್ಟೆಂಬರ್‌ನಲ್ಲಿ ಎಲ್ಲರಿಗೂ ನೇಮಕಾತಿ ಆದೇಶ ನೀಡಲಾಗುವುದು. 412 ಪ್ರಥಮ
ದರ್ಜೆ ಕಾಲೇಜುಗಳಲ್ಲಿ 390 ಕಡೆ ಪ್ರಾಂಶುಪಾಲ ಹುದ್ದೆ ಖಾಲಿ ಇದ್ದು, ನೇರ ನೇಮಕಾತಿ ಅಥವಾ ಬಡ್ತಿ ನೀಡುವ ಕುರಿತು ಗೊಂದಲ ಇರುವುದರಿಂದ ಕಾನೂನು ತಿದ್ದುಪಡಿ ತಂದು ನೇಮಕ ಮಾಡಿಕೊಳ್ಳಲಾಗುವುದು ಎಂದರು. ಕೇಂದ್ರ ಸರ್ಕಾರ
ಐಐಟಿಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇಕಡಾ 25 ರಷ್ಟು ಮೀಸಲಾತಿ ನೀಡುವಂತೆ ಮತ್ತೂಮ್ಮೆ ಮನವಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next