ಬೆಂಗಳೂರು: ಮುಂದಿನ ಎರಡು ತಿಂಗಳಲ್ಲಿ 1500 ಸರ್ವೇಯರ್‌ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸರ್ವೇಯರ್‌ಗಳ ಕೊರತೆ ನೀಗಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದ ಬಹುತೇಕ ಭಾಗಗಳಲ್ಲಿ ಸರ್ವೇಯರ್‌ಗಳ ಕೊರತೆ ಇದ್ದು, ಪೋಡಿ ಮಾಡಿಕೊಡುವ ಕಾರ್ಯ ವಿಳಂಬವಾಗುತ್ತಿರುವುದು ನಿಜ.ಹೀಗಾಗಿ, ನೇಮಕಾತಿಗೆ ಕ್ರಮ ಕೈಗೊಂಡಿದ್ದು ಶೀಘ್ರದಲ್ಲೇ ಸಮಸ್ಯೆ ಬಗೆಹರಿಯಲಿದೆ. ಕಂದಾಯ ಇಲಾಖೆಯಲ್ಲಿ ಬಹುದಿನಗಳಿಂದ ಖಾಲಿ ಇದ್ದ ಬಹುತೇಕ ಹುದ್ದೆಗಳನ್ನುಭರ್ತಿ ಮಾಡಲಾಗಿದ್ದು, ನಿವೃತ್ತಿಯಿಂದ ಖಾಲಿಯಾಗುತ್ತಿರುವ ಹುದ್ದೆಗಳನ್ನು ಕೂಡಾ ತ್ವರಿತಗತಿಯಲ್ಲಿ ತುಂಬಲು ಕ್ರಮ ಕೈಗೊಳ್ಳಲಾಗಿದೆ. ಇತ್ತೀಚೆಗೆ 3 ಸಾವಿರ ಗ್ರಾಮಲೆಕ್ಕಿಗರನ್ನು ನೇಮಕ ಮಾಡಲಾಗಿದೆ ಎಂದರು.
ಸೆಪ್ಟೆಂಬರ್ ಅಂತ್ಯಕ್ಕೆ ಬರ ತಾಲೂಕು ಘೋಷಣೆ ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಸಮರ್ಪಕ ಮಳೆಯಾಗದ ಕಾರಣ ಬರಪೀಡಿತ ತಾಲೂಕುಗಳನ್ನು ಘೋಷಿಸಲು ಸೆಪ್ಟೆಂಬರ್ ಅಂತ್ಯದವರೆಗೂ ಕಾಯಬೇಕಾಗುತ್ತದೆ ಎಂದು ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯ ಸರ್ಕಾರ ಈಗಾಗಲೇ ಬರ ಪರಿಸ್ಥಿತಿ ಎದುರಿಸಲು ಸಜ್ಜಾಗಿದೆ. ಕೇಂದ್ರ ಸರ್ಕಾರವೂ ಹೆಚ್ಚಿನ ನೆರವು ನೀಡಬೇಕಾಗುತ್ತದೆ. ತೆಂಗು ಹಾಗೂ ಅಡಕೆ ಬೆಳೆ ಹಾನಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಜಿಲ್ಲೆ
ಗಳಿಂದ ವರದಿ ತರಿಸಿಕೊಳ್ಳಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಕೇಂದ್ರ ಸರ್ಕಾರದಿಂದ ಎಷ್ಟು ಪ್ರಮಾಣದ ನೆರವು ಕೋರಬೇಕು ಎಂಬುದರ ಪ್ರಸ್ತಾವನೆ ಸಿದಟಛಿಪಡಿಸಲಾಗುವುದು ಎಂದು ತಿಳಿಸಿದರು.