Advertisement

3710 ಪಿಡಿಒಗಳ ನೇಮಕ

06:00 AM Dec 12, 2018 | |

ಸುವರ್ಣಸೌಧ (ವಿಧಾನಪರಿಷತ್‌): ರಾಜ್ಯದ ಕೆಲವು ಗ್ರಾಮ ಪಂಚಾಯತ್‌ಗಳಲ್ಲಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳ ಕೊರತೆ ಇದ್ದು ನೇರ ನೇಮಕಾತಿ ಕೋಟಾದಡಿ 3,913 ಹುದ್ದೆಗಳ ಪೈಕಿ 3,710 ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Advertisement

ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಅಪ್ಪಾಜಿಗೌಡ ಅವರ ಪ್ರಶ್ನೆಗೆ ಉತ್ತರ ನೀಡಿರುವ ಅವರು ಮುಂಬಡ್ತಿ ಕೋಟಾ ದಡಿ 2108 ಹುದ್ದೆಗಳ ಪೈಕಿ 1313 ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆಎಂದು ತಿಳಿಸಿದರು. ಗ್ರಾಮೀಣಾಭಿವೃದಿಟಛಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ 25 ಇಲಾಖೆಗಳ ಸೇವೆಯನ್ನು ಆನ್‌ ಲೈನ್‌ ವ್ಯವಸ್ಥೆಗೆ ಅಳವಡಿಸಲಾಗಿದೆ ಎಂದು ಹೇಳಿದರು. 

ಬೀದರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದಿಂದ ಇದುವರೆಗೆ ಯಾವುದೇ ಶುದ್ಧ ಕುಡಿಯುವ ನೀರಿನ ಘಟಕಗಳು ಮಂಜೂರಾಗಿಲ್ಲ. ಆದರೆ ರಾಜ್ಯ ಸರಕಾರದಿಂದ 408 ಘಟಕಗಳಿಗೆ ಅನುಮೋದನೆ ನೀಡಲಾಗಿದ್ದು 261 ಘಟಕಗಳನ್ನು ಅಳವಡಿಸಲಾಗಿದೆ. ಅದರಲ್ಲಿ 247 ಘಟಕಗಳು ಪ್ರಾರಂಭವಾಗಿವೆ ಎಂದು ಕಾಂಗ್ರೆಸ್‌ನ ಅರವಿಂದ ಕುಮಾರ ಅರಳಿ ಅವರ ಪ್ರಶ್ನೆಗೆ ಉತ್ತರಿಸಿದರು.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಐಎಸ್‌ ವೈ, ನಮ್ಮ ಗ್ರಾಮ ನಮ್ಮ ರಸ್ತೆ ಹಾಗೂ ನಬಾರ್ಡ್‌ ಯೋಜನೆಯಡಿ ಅನುದಾನ ಲಭ್ಯತೆ ಅನುಸಾರ ಗ್ರಾಮೀಣ ರಸ್ತೆಗಳನ್ನುಹಂತ ಹಂತವಾಗಿ ಅಭಿವೃದ್ಧಿಪಡಿಸಿ ಸಂಪರ್ಕ ಜಾಲ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. ಜೆಡಿಎಸ್‌ನ ಎಸ್‌.ಎಲ್‌.ಧರ್ಮೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಗ್ರಾಮೀಣ
ರಸ್ತೆಗಳ ಅಭಿವೃದಿಟಛಿಗಾಗಿ ಸಾಕಷ್ಟು ಅನುದಾನ ಒದಗಿಸಲಾಗಿದೆ. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 2016-17 ನೇ ಸಾಲಿನಲ್ಲಿ 1482.99 ಕೋಟಿ, 2017-18 ರಲ್ಲಿ1787.04 ಕೋಟಿ, 2018-19 ರಲ್ಲಿ 1623.78 ಕೋಟಿ ಒದಗಿಸಲಾಗಿದೆ ಎಂದು ಹೇಳಿದರು.

ಆರೋಗ್ಯ ಯೋಜನೆ ನೋಂದಣಿ
ರಾಜ್ಯದ 8 ಜಿಲ್ಲೆಗಳ 11ಆಸ್ಪತ್ರೆಗಳಲ್ಲಿ ಮೊದಲ ಹಂತದಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಅನ್ವಯ ನೋಂದಣಿ ನಡೆಯುತ್ತಿದೆ. ಇ ಆಡಳಿತ ಇಲಾಖೆಯೊಂದಿಗೆ ಬೆಂಗಳೂ ರು ಒನ್‌ ಹಾಗೂ ಕರ್ನಾಟಕ ಒನ್‌ ಕೇಂದ್ರಗಳ ಮೂಲಕ ಕಾರ್ಡ್‌ಗಳನ್ನು ವಿತರಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶಿವಾನಂದ ಪಾಟೀಲ ಹೇಳಿದರು. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ ಸದಸ್ಯ ಕೆ.ಗೋವಿಂದರಾಜ ಅವರ ಪ್ರಶ್ನೆಗೆ ಉತ್ತರ ನೀಡಿರುವ ಅವರು, ಈಗಾಗಲೇ ಯೋಜನೆಯಡಿ ಪ್ರತಿ ಜಿಲ್ಲೆಗಳಲ್ಲಿ ಫಲಾನುಭವಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಕಾರ್ಡ್‌ ಇಲ್ಲದೆ ತೊಂದರೆಗೆ ಒಳಗಾದ
ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next