Advertisement

ಗ್ರಾಮೀಣ ಪ್ರದೇಶಗಳಲ್ಲಿ 450 ವೈದ್ಯರ ನೇಮಕ 

06:15 AM Sep 28, 2018 | Team Udayavani |

ಬೆಳಗಾವಿ: ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು 450 ವೈದ್ಯರ ನೇಮಕಾತಿ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ನೇಮಕಾತಿ ಆಗಿರುವ ವೈದ್ಯರಿಗೆ ಸ್ಥಳ ತೋರಿಸಿ ಆದೇಶ ನೀಡಲಾಗಿದೆ. ಇದಲ್ಲದೇ 1650 ಶುಶ್ರೂಷಕಿಯರನ್ನು ಸಹ ನೇಮಕಾತಿ ಮಾಡಿ ಆದೇಶ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡ ಜನರಿಗೆ ಸಕಾಲಕ್ಕೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗಳನ್ನು ತೆರೆಯಲಾಗುತ್ತಿದ್ದು, ಅ. 2 ರಂದು ರಾಜ್ಯದಲ್ಲಿ 57 ಹೊಸ ಕಟ್ಟಡಗಳು ಸಾರ್ವಜನಿಕರ ಸೇವೆಗೆ ಸಮರ್ಪಣೆಯಾಗಲಿವೆ ಎಂದು ಹೇಳಿದರು.

ಇದಲ್ಲದೇ ಅ.2 ರಂದು ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮತ್ತು ಕಲಬುರಗಿ ವಿಭಾಗದ ಎರಡು ಜಿಲ್ಲೆಗಳಲ್ಲಿ ತಾಯಿ ಹಾಗೂ ಮಕ್ಕಳ ಅಸ್ಪತ್ರೆ ಉದ್ಘಾಟನೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next