ಶಿವಮೊಗ್ಗ ಕ್ಷೇತ್ರ ಉಸ್ತುವಾರಿ: ಶಾಸಕರಾದ ಕೆ.ಎಸ್.ಈಶ್ವರಪ್ಪ, ಸುನೀಲ್ ಕುಮಾರ್, ಪಿ.ರಾಜೀವ್, ಸಂಸದರಾದ ಜಿ. ಎಂ.ಸಿದ್ದೇಶ್ವರ್, ಶಿವಕುಮಾರ್ ಉದಾಸಿ, ಮಾಜಿ ಸಚಿವ ಡಿ.ಎನ್.ಜೀವರಾಜ್.
ಬಳ್ಳಾರಿ ಕ್ಷೇತ್ರದ ಉಸ್ತುವಾರಿ: ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಶಾಸಕರಾದ ಬಿ. ಶ್ರೀರಾಮುಲು, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ, ಎನ್.ರವಿಕುಮಾರ್, ಪ್ರಭು ಚವ್ಹಾಣ್, ಮಾಜಿ ಶಾಸಕ ರಾಮಣ್ಣ ಲಮಾಣಿ.
ಮಂಡ್ಯ ಕ್ಷೇತ್ರದ ಉಸ್ತುವಾರಿ: ಆರ್.ಅಶೋಕ್, ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ.
ಜಮಖಂಡಿ ಕ್ಷೇತ್ರದ ಉಸ್ತುವಾರಿ: ಪಿ.ಸಿ.ಗದ್ದಿಗೌಡರ್, ಪ್ರಭಾಕರ ಕೋರೆ, ಜಗದೀಶ ಶೆಟ್ಟರ್, ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ.
ರಾಮನಗರ ಕ್ಷೇತ್ರದ ಉಸ್ತುವಾರಿ: ಡಿ.ವಿ.ಸದಾನಂದಗೌಡ, ಸಿ.ಪಿ.ಯೋಗೇಶ್ವರ್, ಎ.ನಾರಾಯಣಸ್ವಾಮಿ, ಮುಖಂಡ ತುಳಸಿ ಮುನಿರಾಜುಗೌಡ.
ಇದೇ ವೇಳೆ ಶಾಸಕ ಬಿ.ಶ್ರೀರಾಮುಲು ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಳ್ಳಾರಿ ಲೋಕಸಭಾ ಉಪಚುನಾವಣೆ ಸಿದ್ಧತೆ ಬಗ್ಗೆ
ಚರ್ಚಿಸಿದರು.
Advertisement
ಜಮಖಂಡಿ ಕ್ಷೇತ್ರದ ಗೊಂದಲಕ್ಕೆ ತೆರೆ ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ತಮ್ಮ ಕುಟುಂಬದ ಯಾರೊಬ್ಬರೂ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಮುರುಗೇಶ್ ನಿರಾಣಿ ಸ್ಪಷ್ಟಪಡಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿನ ಗೊಂದಲಕ್ಕೆ ಮಂಗಳವಾರ ಬೆಳಗ್ಗೆಯೇ ತೆರೆ ಎಳೆದರು. ಬಿ.ಎಸ್ .ಯಡಿಯೂರಪ್ಪ ನಿವಾಸದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಯಾರೇ ಅಭ್ಯರ್ಥಿಯಾದರೂ ಬೆಂಬಲಿಸಿ ಗೆಲುವಿಗೆ ಶ್ರಮಿಸುತ್ತೇವೆ ಎಂದಿದ್ದರು. ಯಡಿಯೂರಪ್ಪ ಅವರನ್ನು ಜಮಖಂಡಿಯ ಸ್ಥಳೀಯ ಮುಖಂಡರು ಭೇಟಿಯಾಗಿ ಚರ್ಚಿಸಿದರು. ಶ್ರೀಕಾಂತ್ ಕುಲಕರ್ಣಿ ಹೊರತುಪಡಿಸಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ. ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಕಡೆಗಣಿಸಿರುವ ಅವರಿಗೆ ಟಿಕೆಟ್ ನೀಡಬಾರದು ಎಂದು ಕೋರಲಾಗಿದೆ ಎಂದು ಸ್ಥಳೀಯ ಮುಖಂಡ ಚನ್ನಪ್ಪ ಗೌರೋಜಿ ಹೇಳಿದ್ದರು. ಆದರೆ ಸಂಜೆ ಕೋರ್ ಕಮಿಟಿ ಸಭೆಯಲ್ಲಿ ಶ್ರೀಕಾಂತ್ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.