Advertisement

ಕೆಪಿಸಿಸಿ ಅಧ್ಯಕ್ಷರ ನೇಮಕ: ಹೈಕಮಾಂಡ್‌ ತೀರ್ಮಾನವೇ ಅಂತಿಮ

05:15 PM Mar 08, 2020 | Team Udayavani |

ಮಂಡ್ಯ: ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Advertisement

ಬೆಂಗಳೂರಿನಿಂದ ಚಾಮರಾಜನಗರಕ್ಕೆ ಹೋಗುವ ಮಾರ್ಗಮಧ್ಯೆ ಮದ್ದೂರಿನಲ್ಲಿ ಜಿಲ್ಲಾ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಡಿ.ಕೆ. ಶಿವಕುಮಾರ್‌ ಅವರನ್ನು ನೇಮಕ ಮಾಡುವ ಕುರಿತಂತೆ ಪಕ್ಷದ ಹಿರಿಯ ನಾಯಕರಲ್ಲಿ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯ ಕಾಂಗ್ರೆಸ್‌ನ ಎಲ್ಲ ನಾಯಕರನ್ನು ಒಗ್ಗೂಡಿಸಿಕೊಂಡು ಹೋಗುವ ಹಾಗೂ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆನ್ನುವುದು ಪಕ್ಷದ ಹೈಕಮಾಂಡ್‌ ಆಲೋಚನೆಯಾಗಿದೆ. ಹೀಗಾಗಿ ಅಧ್ಯಕ್ಷರ ನೇಮಕಾತಿ ವಿಳಂಬವಾಗುತ್ತಿದೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ನಾನಲ್ಲ. ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಇನ್ನೂ ಕೆಲವು ಹಿರಿಯ ನಾಯಕರಿದ್ದಾರೆ. ಅವರಿಗೆ ಸ್ಥಾನ ನೀಡಬೇಕೆನ್ನುವುದು ನನ್ನ ಸ್ಪಷ್ಟ ಅಭಿಪ್ರಾಯವಾಗಿದೆ ಎಂದರು. ಪಕ್ಷ ಸಂಘಟನೆಯ ದೃಷ್ಟಿಯಿಂದ ಹೈಕಮಾಂಡ್‌ ನನಗೆ ಯಾವುದೇ ಹೊಣೆಗಾರಿಕೆ ವಹಿಸಿದರೂ ನಾನು ನಿರ್ವಹಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು. ರಾಜ್ಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದಲಿತರ ಮೇಲೆ ನಿರಂತರ ನಡೆಯುತ್ತಿದೆ ಎನ್ನುವುದು ನಾಚಿಕೆಗೇಡಿನ ಸಂಗತಿ. ಬಿಜೆಪಿ ಸರ್ಕಾರ ದಲಿತರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌, ಕಾರ್ಯದರ್ಶಿ ಅಜ್ಜಹಳ್ಳಿ ರಾಮಕೃಷ್ಣ, ಮದ್ದೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿಪಂ ಮಾಜಿ ಅಧ್ಯಕ್ಷ ಸುರೇಶ್‌ ಕಂಠಿ, ಕಾಂಗ್ರೆಸ್‌ ಎಸ್ಸಿ ಘಟಕದ ಅಧ್ಯಕ್ಷ ಸಿದ್ದಲಿಂಗು, ಕಾರ್ಮಿಕ ಘಟಕದ ಏಳುಮಲೈ, ಮಾಜಿ ಸೆನೆಟ್‌ ಸದಸ್ಯ ವಿ.ಕೆ.ಜಗದೀಶ್‌, ಮಂಡ್ಯ ನಗರಸಭೆ ಮಾಜಿ ಸದಸ್ಯ ದೀಪಕ್‌, ಮುಖಂಡರಾದ ಎಚ್‌.ವಿ.ರಾಮಶೆಟ್ಟಿ, ಮೇಲುಕೋಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಿಜಯಕುಮಾರ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next