Advertisement

High Court ಕೆಎಸ್‌ಎಟಿ ಸದಸ್ಯರ ನೇಮಕ: ರಾಜ್ಯ ಸರ್ಕಾರಕ್ಕೆ ನೋಟಿಸ್‌

09:38 PM Jun 25, 2024 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ)ಗೆ ಸದಸ್ಯರನ್ನು ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ವಿಚಾರವಾಗಿ ವಕೀಲ ನರಸಿಂಹರಾಜು ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಕೆಲಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಆಡಳಿತ ನ್ಯಾಯಮಂಡಳಿಯ ರಿಜಿಸ್ಟ್ರಾರ್‌ ಅವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಿತು.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next