Advertisement

ಪ್ರವಾಹ ನಿರ್ವಹಣೆಗೆ ನೋಡಲ್‌ ಅಧಿಕಾರಿಗಳ ನೇಮಕ

09:58 AM Aug 11, 2020 | Suhan S |

ಹಾವೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹ ಸ್ಥಿತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಂಟ್ರೋಲ್‌ ರೂಂ ಸ್ಥಾಪಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್‌ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಸಹಾಯವಾಣಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ತಿಳಿಸಿದ್ದಾರೆ.

Advertisement

ಜಿಲ್ಲೆಯ ಪ್ರವಾಹ ಪಿಡಿತ ಪ್ರದೇಶಗಳ ಸಮರ್ಥ ನಿರ್ವಹಣೆ ಹಿನ್ನೆಲೆಯಲ್ಲಿ ಹಾವೇರಿ ತಾಲೂಕಿಗೆ ನೋಡಲ್‌ ಅಧಿ ಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚೈತ್ರಾ (ಮೊ. 9480843036) ಮತ್ತು ಹಾವೇರಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿ ಕಾರಿ (ಮೊ. 9480868110) ಹಾಗೂ ಹೆಚ್ಚುವರಿ ನೋಡಲ್‌ ಅ ಧಿಕಾರಿಯಾಗಿ ಯುವಜನ ಮತ್ತು ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ (ಮೊ. 9482455663) ಅವರನ್ನು ನೇಮಕ ಮಾಡಲಾಗಿದೆ. ರಾಣೆಬೆನ್ನೂರು ತಾಲೂಕಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗುಡ್ಡಪ್ಪ ಜಿ. (ಮೊ. 9900977876) ಮತ್ತು ರಾಣೆಬೆನ್ನೂರು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್‌ ಅಧಿಕಾರಿಯಾಗಿ ರೇಷ್ಮೆ ಮತ್ತು ಕೃಷಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ ಬಿ.ಎಲ್‌. (ಮೊ. 9482155119) ಅವರನ್ನು ನೇಮಕ ಮಾಡಲಾಗಿದೆ. ಬ್ಯಾಡಗಿ ತಾಲೂಕಿಗೆ ಜಿಲ್ಲಾ ನೋಂದಣಾಧಿ ಕಾರಿ ಡೊಂಬರಮತ್ತೂರ (ಮೊ. 9880122099) ಮತ್ತು ಬ್ಯಾಡಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್‌ ಅಧಿಕಾರಿಯಾಗಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜಾಫರ್‌ ಸುತಾರ (ಮೊ. 9480461770 ಅವರನ್ನು ನೇಮಕ ಮಾಡಲಾಗಿದೆ. ಹಿರೇಕೆರೂರ ಮತ್ತು ರಟ್ಟಿàಹಳ್ಳಿ ತಾಲೂಕಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಮಖಾನೆ (ಮೊ. 7975552336) ಮತ್ತು ಹಿರೇಕೆರೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್‌ ಅ ಧಿಕಾರಿಯಾಗಿ ಡಾ| ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರನ್ನು(ಮೊ. 9448414089) ನೇಮಕ ಮಾಡಲಾಗಿದೆ.

ಸವಣೂರು ತಾಲೂಕಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಜಿಲ್ಲಾ ಅಧಿಕಾರಿ ನಾಗರಾಜ (ಮೊ. 9916648339) ಮತ್ತು ಸವಣೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್‌ ಅಧಿಕಾರಿಯಾಗಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪಿ.ವೈ.ಶೆಟ್ಟಪ್ಪನವರ (ಮೊ. 9480022969) ಅವರನ್ನು ನೇಮಕ ಮಾಡಲಾಗಿದೆ.

ಶಿಗ್ಗಾವಿ ತಾಲೂಕಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ (ಮೊ. 9886635499) ಮತ್ತು ಶಿಗ್ಗಾವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್‌ ಅಧಿಕಾರಿಯಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ವಿನಾಯಕ ಜೋಷಿ (ಮೊ. 9448826871) ಅವರನ್ನು ನೇಮಕ ಮಾಡಲಾಗಿದೆ.

ಹಾನಗಲ್ಲ ತಾಲೂಕಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುಭಾಸಗೌಡ್ರ (ಮೊ. 9916565361) ಮತ್ತು ಹಾನಗಲ್ಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್‌ ಅಧಿಕಾರಿಯಾಗಿ ಪಶುಪಾಲನೆ ಮತ್ತು ಪಶು ವೈದ್ಯ ಸೇವೆಯ ಸಹಾಯಕ ನಿರ್ದೇಶಕ ರಾಜು ಕೂಲೇರ (ಮೊ. 7760627272) ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next