Advertisement

ಪೊಲೀಸ್‌ ದೂರು ಪ್ರಾಧಿಕಾರದ ಅಧ್ಯಕ್ಷರ ನೇಮಕ: ಸರ್ಕಾರಕ್ಕೆ ನೋಟಿಸ್‌

01:34 AM Jul 05, 2019 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತಂತೆ ವಕೀಲೆ ಸುಧಾ ಕಾಟವಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಎಚ್.ಟಿ. ನರೇಂದ್ರ ಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾ ರಣಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಿತು.

ಅಲ್ಲದೇ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಮುಖ್ಯಸ್ಥರನ್ನು ನೇಮಕ ಮಾಡುವ ಹಾಗೂ ಅರ್ಜಿದಾರರು ದೂರಿರುವಂತೆ ಪ್ರಾಧಿಕಾರಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಒಂದು ತಿಂಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಆಗಸ್ಟ್‌ 6ಕ್ಕೆ ಮುಂದೂಡಿತು.


Advertisement

Udayavani is now on Telegram. Click here to join our channel and stay updated with the latest news.

Next